3:31 PM Wednesday 3 - December 2025

ಕೊನೆಗೂ ಬಿಹಾರ ಮುಖ್ಯಮಂತ್ರಿಯ ಆಯ್ಕೆ | ಸಭೆಯ ಬಳಿಕ ಅಂತಿಮ ನಿರ್ಧಾರ ಪ್ರಕಟ

15/11/2020

ಪಾಟ್ನಾ: ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಅವರನ್ನು ಅಂತಿಮವಾಗಿ ಆಯ್ಕೆ ಮಾಡಲಾಗಿದ್ದು,  ಸತತ ನಾಲ್ಕನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್  ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸುಶೀಲ್ ಮೋದಿಯವರನ್ನು  ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದ್ದು, ಈ ಮೂಲಕ ಉಪ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ದಲಿತ ನಾಯಕರ ನಿರೀಕ್ಷೆ ಹುಸಿಯಾಗಿದೆ.

ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರನ್ನು ಎನ್ ಡಿಎ ಶಾಸಕಾಂಗ ಪಕ್ಷದ ನಾಯಕರನ್ನಾಗಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್ ಡಿಎ) ಭಾನುವಾರ ಆಯ್ಕೆ ಮಾಡಿತು.

ನಿತೀಶ್ ಕುಮಾರ್ ಅವರು ರಾಜ್ಯಪಾಲರ ಭವನದಲ್ಲಿ ಸೋಮವಾರ ಬೆಳಗ್ಗೆ 11:30ಕ್ಕೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇತ್ತೀಚಿನ ಸುದ್ದಿ

Exit mobile version