ರಸ್ತೆ ಬದಿ ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
01/01/2023
ಮಂಡ್ಯ: ರಸ್ತೆ ಬದಿ ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿಡಘಟ್ಟ ಬಳಿಯ ಹೆದ್ದಾರಿಯಲ್ಲಿ ನಡೆದಿದೆ.
ಪಶ್ಚಿಮ ಬಂಗಾಳದ ಬೈಬಾದ್ ಷಾ(25) ಮೃತಪಟ್ಟ ಯುವಕನಾಗಿದ್ದು, ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವನಿಗೆ ಗಂಭೀರ ಗಾಯವಾಗಿದೆ. ಘಟನಾ ಸ್ಥಳಕ್ಕೆ ಮದ್ದೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























