1:47 PM Thursday 16 - October 2025

ಏಕಾಏಕಿ ನಿಯಂತ್ರಣ ಕಳೆದುಕೊಂಡ ಬಿಎಂಟಿಸಿ ಬಸ್ ಬೈಕ್‌ ಗೆ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

bmtc
24/01/2022

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕ ನಿಯಂತ್ರಣ ಕಳೆದುಕೊಂಡು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ‌‌.

ಲಕ್ಷ್ಮಿದೇವಿನಗರ ನಿವಾಸಿಯಾಗಿರುವ ಸುರೇಶ್ ಬಾಬು ಮೃತ ದುದೈರ್ವಿಯಾಗಿದ್ದು, ಇಂದು ಬೆಳಗ್ಗೆ ಸುಮಾರು 6.30ರ ವೇಳೆ ಘಟನೆ ಸಂಭವಿಸಿದೆ‌. ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆ ಬಳಿ ಮೆಜೆಸ್ಟಿಕ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್ ಏಕಾಏಕಿ ನಿಯಂತ್ರಣ ಕಳೆದುಕೊಂಡು ಬೈಕ್ ಚಲಾಯಿಸುತ್ತಿದ್ದ ಸುರೇಶ್ ಬಾಬುಗೆ ಡಿಕ್ಕಿ ಹೊಡೆದಿದೆ.

ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಮಲ್ಲೇಶ್ವರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಮಾಜವಾದಿ ವ್ಯವಸ್ಥೆಯ ಹರಿಕಾರ ಲೆನಿನ್ : ಮನೋಜ್ ವಾಮಂಜೂರು

ಪತ್ನಿಯ ಮೂಗನ್ನೇ ಕತ್ತರಿಸಿದ ಪತಿ

28 ನೂತನ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಯಾರಿಗೆ ಯಾವ ಜಿಲ್ಲೆ?

ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ನಿವೃತ್ತಿ ಘೋಷಣೆ

ಇತ್ತೀಚಿನ ಸುದ್ದಿ

Exit mobile version