ಬೈಕ್ ಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು - Mahanayaka

ಬೈಕ್ ಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವು

28/10/2022

ಕಾರ್ಕಳ: ಬೆಳ್ಮಣ್ ನೀರ್ಚಲ್ ಬಳಿ ಇಂದು ಮಧ್ಯಾಹ್ನ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಮುದರಂಗಡಿ ನಿವಾಸಿ ಜಾರ್ಜ್ ಡಿಸೋಜ ಎಂದು ಗುರುತಿಸಲಾಗಿದೆ. ಇವರು ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ವಾಪಸು ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಕಾರು ಇವರ ಬೈಕಿಗೆ ಡಿಕ್ಕಿ ಹೊಡೆಯಿತೆನ್ನಲಾಗಿದೆ.

ಇದರ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ   ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ