11:57 PM Thursday 21 - August 2025

ಬೈಕ್ ಗೆ ಡಿಕ್ಕಿ ಹೊಡೆದ ಟ್ಯಾಂಕರ್: ಸವಾರ ಸ್ಥಳದಲ್ಲೇ ಸಾವು

udupi
11/08/2022

ಉದ್ಯಾವರ: ಟ್ಯಾಂಕರೊಂದು ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ ಅರವತ್ತ ಆರರಲ್ಲಿ ಇಂದು ರಾತ್ರಿ ನಡೆದಿದೆ.

ಮೃತರನ್ನು ಮಲ್ಲಾರು ಗ್ರಾಮದ ಕೋಟೆ ರಸ್ತೆಯ ಜಾಫರ್ ಎಂಬವರ ಮಗ ಅಲ್ಪಾಜ್ ಎಂದು ಗುರುತಿಸಲಾಗಿದೆ.

ಇವರು ಹಿಂಬದಿ ಸವಾರನೊಂದಿಗೆ ಸ್ಕೂಟರಿನಲ್ಲೇ ಕಾಪು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆಯಿತೆನ್ನಲಾಗಿದೆ

ಇದರಿಂದ  ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಅಲ್ಫಾಜ್ ತಲೆಯ ಮೇಲೆ ಟ್ಯಾಂಕರ್ ಚಕ್ರ ಚಲಿಸಿದೆ ಎನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅಲ್ಫಾಜ್ ಸ್ಥಳದಲ್ಲೇ ಮೃತಪಟ್ಟರೆಂದು ತಿಳಿದುಬಂದಿದೆ.

ಸಹಸವಾರ ಸಣ್ಣಪುಟ್ಟ ಗಾಯಗಳೂ ಆಗಿವೆ ಎಂದು ಹೇಳಲಾಗಿದೆ ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version