ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಬೈಕ್ ಪಲ್ಟಿ: ಮೂವರಿಗೆ ಗಂಭೀರ ಗಾಯ - Mahanayaka
10:43 AM Wednesday 11 - December 2024

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಬೈಕ್ ಪಲ್ಟಿ: ಮೂವರಿಗೆ ಗಂಭೀರ ಗಾಯ

accident
08/12/2022

ಬೆಳ್ತಂಗಡಿ; ಚಾರ್ಮಾಡಿ ಘಾಟಿಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಮೂವರಿಗೆ ಗಂಭೀರ ಗಾಯವಾದ ಘಟನೆ ಡಿ.7 ರಂದು ರಾತ್ರಿ ನಡೆದಿದೆ.

ಬುಧವಾರ ತಡ ರಾತ್ರಿ ವೇಳೆಗೆ ಈ ಘಟನೆ ಸಂಭವಿಸಿದ್ದು,ಬೈಕ್ 7 ನೇ ತಿರುವಿನಿಂದ 6 ನೇ ತಿರುವಿಗೆ ಉರುಳಿ ಬಿದ್ದಿದೆ.ಅಪಘಾತದ ತೀವ್ರತೆಗೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಗೊಂಡವರು ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿಗಳಾದ ಯುವರಾಜ್(20), ಆನಂದ ಬಾಬು(29), ಅನಿಲ್ ಕುಮಾರ್(28) ತಿಳಿದು ಬಂದಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ  ಮೂವರು ಊರಿಂದ ವಾಪಾಸು ಬರುತ್ತಿರುವಾಗ ಈ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ