ವಾಹನ ತಪಾಸಣೆ ವೇಳೆ ಸಿಕ್ಕಿ ಬಿದ್ದ ಬೈಕ್ ಕಳ್ಳನ ಬಂಧನ: 3 ವಿವಿಧ ಕಂಪನಿಗಳ ಬೈಕ್ ವಶಕ್ಕೆ - Mahanayaka

ವಾಹನ ತಪಾಸಣೆ ವೇಳೆ ಸಿಕ್ಕಿ ಬಿದ್ದ ಬೈಕ್ ಕಳ್ಳನ ಬಂಧನ: 3 ವಿವಿಧ ಕಂಪನಿಗಳ ಬೈಕ್ ವಶಕ್ಕೆ

bike
04/08/2023


Provided by

ಬೆಂಗಳೂರು: ಬೆಂಗಳೂರು ನಗರದ ಪಶ್ಚಿಮ ವಿಭಾಗದ ಸಿಟಿ ಮಾರ್ಕೆಟ್ ಪೊಲೀಸರು ಕಾರ್ಯಾಚರಣೆ ನಡೆಸಿ ದ್ವಿಚಕ್ರ ವಾಹನ ಕಳ್ಳನನ್ನು ಬಂಧಿಸಿದ್ದಾರೆ.

ಪೊಲೀಸ್ ಠಾಣಾ ಸರಹದ್ದಿನ ಜೆ.ಪಿ ಸ್ಟ್ರೀಟ್ ನಲ್ಲಿ ಆಗಸ್ಟ್ 2ರಂದು ರಾತ್ರಿ 8 ಗಂಟೆಯ ಸಮಯದಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ, ವ್ಯಕ್ತಿಯೋರ್ವ ಟಿ.ವಿ.ಎಸ್. ಎಂಟಾರ್ಕ್ ದ್ವಿಚಕ್ರ ವಾಹನದಲ್ಲಿ ಬಂದಾಗ ಆತನನ್ನು ನಿಲ್ಲಿಸಿ ವಿಚಾರಿಸಲಾಗಿ ಸಮಂಜಸವಾದ ಉತ್ತರ ನೀಡದ ಕಾರಣ, ಅನುಮಾನಗೊಂಡು ಆರೋಪಿಯ ಮೇಲೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ.

ಈ ಪ್ರಕರಣದ ತನಿಖಾ ಕಾಲದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ಎಂ. ಶಿವಕುಮಾರ್ ಮತ್ತು ಸಿಬ್ಬಂದಿ ಆರೋಪಿಯನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಆರೋಪಿ ನೀಡಿದ ಮಾಹಿತಿ ಮೇರೆಗೆ ವಿಜಯನಗರ, ಗಿರಿನಗರ, ಕೆಂಗೇರಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 3 ವಿವಿಧ ಕಂಪನಿಗಳ: ದ್ವಿಚಕ್ರವಾಹನಗಳನ್ನು ವಶ ಪಡಿಸಿಕೊಂಡಿರುತ್ತಾರೆ. ಇದರ ಒಟ್ಟು ಮೌಲ್ಯ 1.25,000/-.ಆಗಿರುತ್ತದೆ.

ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲಕ್ಷ್ಮಣ್ ನಿಂಬರಗಿ ರವರ ಸೂಕ್ತ ಮಾರ್ಗದರ್ಶನದಲ್ಲಿ ಚಿಕ್ಕಪೇಟೆ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ . ಕೆ.ಸಿ.ಗಿರಿ ನಿರ್ದೇಶನದಲ್ಲಿ ಉಪ್ಪರಪೇಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ .ವಸಂತ್, ಹೆಚ್.ಎಸ್ ಹಾಗೂ ಸಿಬ್ಬಂದಿಯವರ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.

 ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ