ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್ ನಲ್ಲಿ ಸಂಚರಿಸಿ ಸಿಕ್ಕಿ ಬಿದ್ದ ಬೈಕ್ ಕಳ್ಳ!

manglore
25/08/2023

ಮಂಗಳೂರು ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಯುವಕನನ್ನು ಬಂಧಿಸಲಾಗಿದೆ.
ಶನೀಝ್(23) ಬಂಧಿತ ಯುವಕ.

ಕದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು.

ಪಂಪ್ ವೆಲ್ ಮೇಲ್ಸೇತುವೆ ಬಳಿ ವಾಹನಗಳನ್ನು ಪರಿಶೀಲಿಸುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತನಿಂದ ಸುಮಾರು 1.01 ಲಕ್ಷ ಮೌಲ್ಯದ 2 ದ್ವಿಚಕ್ರ ವಾಹನಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇತ್ತೀಚಿನ ಸುದ್ದಿ

Exit mobile version