ಜಾತ್ರೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಸಾವು, ಹಲವರಿಗೆ ಗಾಯ
ವಿಜಯಪುರ: ಜಾತ್ರೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟದಿಂದಾಗಿ ನಾಲ್ವರು ಪ್ರಾಣ ಕಳೆದುಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಬಳಿ ಗುರುವಾರ ನಡೆದಿದೆ.
ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಹಾಗೂ ರಸ್ತೆ ಬದಿಯಲ್ಲಿ ನಿಂತಿದ್ದ ಇಬ್ಬರು ಅಮಾಯಕರು ಸೇರಿದಂತೆ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಕುಂಟೋಜಿ ಗ್ರಾಮದ ಶ್ರೀ ಬಸವೇಶ್ವರ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ಜಾತ್ರೆಗೆ ಬಂದಿದ್ದ ಇಬ್ಬರು ಯುವಕರು ಪಲ್ಸರ್ 200 ಸಿಸಿ ಬೈಕ್ ನಲ್ಲಿ ವ್ಹೀಲಿಂಗ್ ಮಾಡಿದ್ದಾರೆ. ವ್ಹೀಲಿಂಗ್ ಮಾಡುತ್ತಿರುವ ವೇಳೆ ಅಪಘಾತ ಸಂಭವಿಸಿದೆ.
ಬೈಕ್ ಸವಾರ ತಾಳಿಕೋಟೆ ತಾಲೂಕಿನ ಗೋಟಖಂಡಕಿ ಗ್ರಾಮದ ವಾಸಿ ನಿಂಗರಾಜ ಚೌಧರಿ (22) ಹಾಗೂ ಹಿಂಬದಿ ಸವಾರ ದೇವರಹಿಪ್ಪರಗಿ ತಾಲೂಕಿನ ಹಂಚಲಿ ಗ್ರಾಮದ ನಿವಾಸಿ ಅನೀಲ ಖೈನೂರ (23) ಹಾಗೂ ರಸ್ತೆ ಬದಿ ನಿಂತಿದ್ದ ಮಲಗಲದಿನ್ನಿ ಗ್ರಾಮದ ಉದಯಕುಮಾರ ಪ್ಯಾಟಿ (19) ಸ್ಥಳದಲ್ಲೇ ಮೃತಪಟ್ಟರೆ, ರಾಯಪ್ಪ ಬಾಗೇವಾಡಿ (24) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಎಸ್ ಪಿ ಶಂಕರ ಮಾರೀಹಾಳ, ಡಿವೈಎಸ್ಪಿ ಬನಪ್ಪ ನಂದಗಾವಿ ಹಾಗೂ ಇತರೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: