ಬೈಕ್ ನ ಹಿಂಬದಿಯಲ್ಲಿ ಮಕ್ಕಳನ್ನು ಕೂರಿಸಿಕೊಂಡು ಪ್ರಯಾಣಿಸಲು ಹೊಸ ರೂಲ್ಸ್ - Mahanayaka
5:21 PM Wednesday 20 - August 2025

ಬೈಕ್ ನ ಹಿಂಬದಿಯಲ್ಲಿ ಮಕ್ಕಳನ್ನು ಕೂರಿಸಿಕೊಂಡು ಪ್ರಯಾಣಿಸಲು ಹೊಸ ರೂಲ್ಸ್

bike
27/10/2021


Provided by

ನವದೆಹಲಿ: ಸಣ್ಣ ಮಕ್ಕಳನ್ನು ಬೈಕ್ ನಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊಸ ರಸ್ತೆ ಸುರಕ್ಷತಾ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಿದೆ.

ಈ ಹೊಸ ನಿಯಮದ ಪ್ರಕಾರ, 4 ವರ್ಷ ವಯಸ್ಸಿನೊಳಗಿನ ಮಕ್ಕಳನ್ನು  ಬೈಕ್ ನ(ದ್ವಿಚಕ್ರ ವಾಹನ) ಹಿಂಬದಿಯಲ್ಲಿ ಕೂರಿಸಿಕೊಂಡು ಪ್ರಯಾಣಿಸುವವರು  ಗಂಟೆಗೆ 40 ಕಿ.ಮೀ. ಮೀರಬಾರದು. 9 ತಿಂಗಳಿನಿಂದ 4 ವರ್ಷದೊಳಗಿನ ಮಕ್ಕಳಿಗೆ ಕ್ರ್ಯಾಶ್ ಹೆಲ್ಮೆಟ್ ತೊಡಿಸಿದ ಬಳಿಕ ಬೈಕ್ ನಲ್ಲಿ ಪ್ರಯಾಣಿಸಬೇಕು ಎಂದು ಹೇಳಲಾಗಿದೆ.

ಇನ್ನೂ ಹಿಂಬದಿಯಲ್ಲಿ ಮಕ್ಕಳನ್ನು ಕೂರಿಸಿಕೊಂಡು ಹೋಗುವುದಾದರೆ, ಬೈಕ್ ಸವಾರನನ್ನು ಕೂಡಿಸುವಂತೆ ಸುರಕ್ಷತಾ ಪಟ್ಟಿಯನ್ನು ಒದಗಿಸಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಟ್ವೀಟ್ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇತ್ತೀಚಿನ ಸುದ್ದಿ