ಅತೀ ವೇಗದಿಂದ ಬಂದು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಬೈಕ್ ಗಳು: ಇಬ್ಬರು ಸ್ಥಳದಲ್ಲೇ ಸಾವು
ಚಾಮರಾಜನಗರ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಗುಂಡ್ಲುಪೇಟೆ ಪಟ್ಟಣದ ಸೆಂಟ್ ಜಾನ್ಸ್ ಶಾಲೆಯ ಬಳಿ ನಡೆದಿದೆ.
ಗುಂಡ್ಲುಪೇಟೆ ತಾಲೂಕಿನ ಜಕ್ಕಹಳ್ಳಿ ಗ್ರಾಮದ ಚಂದ್ರು(32), ಲಕ್ಕೂರು ಗ್ರಾಮದ ಅನಿಲ್(26) ಮೃತ ವ್ಯಕ್ತಿಗಳಾಗಿದ್ದು, ಬೈಕ್ ನಲ್ಲಿದ್ದ ಮತ್ತೋರ್ವ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಎರಡು ಬೈಕ್ ಸವಾರರು ಅತೀ ವೇಗದಿಂದ ಬಂದ ಪರಿಣಾಮ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.
ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತ ದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದು, ಬೈಕ್ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಲಿಸಿಕೊಂಡಿದ್ದಾರೆ.
ಅನಿಲ್
ಚಂದ್ರು
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka