ವಿಮಾನಕ್ಕೆ ಡಿಕ್ಕಿಯಾದ ಹಕ್ಕಿ: ತಪ್ಪಿದ ಭಾರೀ ಅನಾಹುತ

ನವದೆಹಲಿ: ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಪರಿಣಾಮ ವಿಮಾನವು ದೆಹಲಿಯ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನವನ್ನು ಎಂಜಿನಿಯರಿಂಗ್ ತಂಡವು ತಪಾಸಣೆ ನಡೆಸುತ್ತಿದ್ದು, ಪರಿಶೀಲನೆ ಬಳಿಕ ಸೇವೆಗೆ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
“ಅಕ್ಟೋಬರ್ 10ರಂದು ಪುಣೆಯಿಂದ ದೆಹಲಿಗೆ ಹೊರಟಿದ್ದ ಆಕಾಶ ಏರ್ ವಿಮಾನಕ್ಕೆ (QP 1607) ಹಕ್ಕಿ ಡಿಕ್ಕಿ ಹೊಡೆದಿದೆ. ವಿಮಾನವು ಸುರಕ್ಷಿತವಾಗಿ ಇಳಿದಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ’ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ವಿಮಾನಯಾನ ಸಂಸ್ಥೆಯು ಪ್ರಯಾಣಿಕರ ಸಂಖ್ಯೆಯ ಬಗ್ಗೆ ವಿವರಗಳನ್ನು ಬಹಿರಂಗಪಡಿಸಿಲ್ಲ. ಆದರೆ, ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.
ಹಕ್ಕಿ ಡಿಕ್ಕಿ ಹೊಡೆದ ವಿಮಾನವು ದೆಹಲಿಯಿಂದ ಗೋವಾಕ್ಕೆ ಹಾರಾಟ ನಡೆಸಬೇಕಿತ್ತು. ಈ ಮಾರ್ಗಕ್ಕೆ ಮತ್ತೊಂದು ವಿಮಾನವನ್ನು ನಿಯೋಜಿಸಿದ್ದರಿಂದ ಕೆಲವು ಗಂಟೆಗಳ ಕಾಲ ಸೇವೆಯಲ್ಲಿ ವ್ಯತ್ಯಯ ಉಂಟಾಗಿತ್ತು ಎಂದು ಮೂಲಗಳು ತಿಳಿಸಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD