ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಮುಳಯ್ಕಲ್ ತಪ್ಪಿತಸ್ಥನಲ್ಲ; ಕೋರ್ಟ್ - Mahanayaka
10:40 AM Tuesday 21 - October 2025

ಕ್ರೈಸ್ತ ಸನ್ಯಾಸಿನಿಯ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಮುಳಯ್ಕಲ್ ತಪ್ಪಿತಸ್ಥನಲ್ಲ; ಕೋರ್ಟ್

bishop franco mulakkal
14/01/2022

ತಿರುವನಂತಪುರಂ: 2014 ಮತ್ತು 2016ರ ನಡುವೆ ಹಲವಾರು ಬಾರಿ ಕ್ರೈಸ್ತ ಸನ್ಯಾಸಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಬಿಷಪ್ ಫ್ರಾಂಕೋ ಮುಳಯ್ಕಲ್ ಅವರನ್ನು ಕೇರಳದ ನ್ಯಾಯಾಲಯವು ಖುಲಾಸೆಗೊಳಿಸಿದೆ.

ಫ್ರಾಂಕೋ ಮುಳಯ್ಕಲ್ ಅವರು ಸನ್ಯಾಸಿನಿಯೊಬ್ಬರ ದೂರಿನ ಆಧಾರದ ಮೇಲೆ ಅತ್ಯಾಚಾರಕ್ಕಾಗಿ ಬಂಧಿಸಲ್ಪಟ್ಟ ಭಾರತದ ಮೊದಲ ಕ್ಯಾಥೋಲಿಕ್ ಬಿಷಪ್ ಆಗಿದ್ದರು. ಫ್ರಾಂಕೋ ಮುಳಯ್ಕಲ್ ಅವರು ಪೊಲೀಸರು ಮತ್ತು ನ್ಯಾಯಾಲಯಕ್ಕೆ ಎಲ್ಲರೂ ಸಹಕಾರ ನೀಡಿದ್ದಾರೆ ಎಂದು ಅವರ ಪರ ವಕೀಲರು ಹೇಳಿದ್ದಾರೆ. ಫ್ರಾಂಕೋ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಬಲವಂತದ ಬಂಧನದ ಆರೋಪ ಹೊರಿಸಲಾಗಿತ್ತು.

ಕೊಟ್ಟಾಯಂನ ನ್ಯಾಯಾಲಯವು 100 ದಿನಗಳಿಗೂ ಹೆಚ್ಚು ಕಾಲ ನಡೆದ ವಿಚಾರಣೆಯ ನಂತರ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿತು. 2018ರಲ್ಲಿ, ಜಲಂಧರ್ ಡಯಾಸಿಸ್ ಅಧೀನದಲ್ಲಿರುವ ಸಭೆಯ ಸನ್ಯಾಸಿನಿಯರು ಬಿಷಪ್ ಫ್ರಾಂಕೋ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು.

ಕೋಟ್ಟಯಂ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಿ. ಗೋಪಕುಮಾರ್ ಅವರು ಈ ತೀರ್ಪು ನೀಡಿದ್ದಾರೆ. ಮಿಷನರೀಸ್ ಆಫ್ ಜೀಸಸ್ ಕಾನ್ವೆಂಟ್‌ನ ಸದಸ್ಯೆ ಹಾಗೂ ಕುರವಿಲಂಗಾಡ್ ನಡುಕುನ್ನು ಸೇಂಟ್ ಫ್ರಾನ್ಸಿಸ್ ಮಿಷನ್ ಹೋಮ್‌ನ ನಿವಾಸಿ ನೀಡಿದ ದೂರಿನ ಮೇರೆಗೆ ಕುರವಿಲಂಗಾಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪ್ರಾಸಿಕ್ಯೂಷನ್ ಪರವಾಗಿ ವಿಶೇಷ ನ್ಯಾಯವಾದಿಗಳಾದ ಜಿತೇಶ್ ಜೆ.ಬಾಬು ಮತ್ತು ಸುಬಿನ್ ಕೆ. ವರ್ಗೀಸ್ ಮತ್ತು ವಕೀಲರಾದ ಕೆ ರಾಮನ್ ಪಿಳ್ಳೈ ಮತ್ತು ಸಿಎಸ್ ಅಜಯನ್ ವಾದ ಮಂಡಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DbJM9kayC1K4utc3ntXPdh

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಾಗ್ದಾದ್: ಯುಎಸ್ ರಾಯಭಾರ ಕಚೇರಿಯ ಮೇಲೆ ರಾಕೆಟ್ ದಾಳಿ

ನಿದ್ದೆಗೆ ಜಾರಿದ ಕಾರು ಚಾಲಕ:  ಭೀಕರ ಅಪಘಾತದಲ್ಲಿ 7 ಮಂದಿ ಸಾವು

ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಸಾವು

ಕಳ್ಳನನ್ನು 1 ಕಿ.ಮೀ. ದೂರ ಬೆನ್ನಟ್ಟಿ ಹಿಡಿದ ಪೊಲೀಸ್ | ವಿಡಿಯೋ ವೈರಲ್

ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಬಾಲಕಿಯ ಮೇಲೆ ಅತ್ಯಾಚಾರ!

 

ಇತ್ತೀಚಿನ ಸುದ್ದಿ