ಬಿಟ್ ಕಾಯಿನ್ ಹಗರಣ ಮರು ತನಿಖೆಗೆ ಆದೇಶ: ಪ್ರಭಾವಿ ರಾಜಕಾರಣಿಗಳಿಗೆ ಸಂಕಷ್ಟ
ಬೆಂಗಳೂರು: ಬಿಟ್ ಕಾಯಿನ್ ಹಗರಣ ಮರು ತನಿಖೆ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದ ಡಿಜಿ&ಐಜಿ ಅಲೋಕ್ ಮೋಹನ್ ಪ್ರಕರಣದ ಸಾರಾಂಶ ತಿಳಿಸಿದ್ದು , ಈ ಮೂಲಕ ಪ್ರಕರಣದ ಮರು ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಬಿಟ್ ಕಾಯಿನ್ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ಬಿಡುಗಡೆ ಮಾಡಿದ್ದರು.
ಕಾಟನ್ ಪೇಟೆಯಲ್ಲಿ ದಾಖಲಾಗಿದ್ದ ಬಿಟ್ ಕಾಯಿನ್ ಪ್ರಕರಣದಲ್ಲಿ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಮತ್ತೆ ತನಿಖೆ ಮಾಡಿಸಲು ಮುಂದಾದ ಸರ್ಕಾರ, ಬಿಜೆಪಿ ಕಾಲದ ಪ್ರಕರಣಕ್ಕೆ ಮರು ಜೀವದ ತೀರ್ಮಾನ ಮಾಡಿದೆ.
ಮೊದಲ ಹಂತವಾಗಿ ನಗರ ಪೊಲೀಸ್ ಆಯುಕ್ತ ದಯಾನಂದ್ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದರು. ಬಳಿಕ ಅಲೋಕ್ ಮೋಹನ್ ಪತ್ರದ ಮೂಲಕ ಸರ್ಕಾರಕ್ಕೆ ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ. ಯಾವ ತನಿಖಾ ಸಂಸ್ಥೆಗೆ ತನಿಖೆಗೆ ನೀಡಬೇಕೆಂದು ತೀರ್ಮಾನ ಮಾಡಲಿರೋ ಸರ್ಕಾರ ಸಿಐಡಿಯಿಂದಲಾ? ಎಸ್ ಐಟಿ ಇಂದಲಾ ತನಿಖೆ? ಎಂಬುದನ್ನು ಇನ್ನೆರಡು ದಿನಗಳಲ್ಲಿ ಸ್ಪಷ್ಟಪಡಿಸಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























