ಬಿಜೆಪಿ ಹಾಗೂ ಜೆಡಿಎಸ್ ಒಂದೇ ದೇಹದ ಎರಡು ಕಣ್ಣುಗಳಿದ್ದಂತೆ: ಹೆಚ್.ಡಿ.ಕುಮಾರಸ್ವಾಮಿ

ರಾಮನಗರ: ಬಿಜೆಪಿ ಹಾಗೂ ಜೆಡಿಎಸ್ ಒಂದೇ ದೇಹದ ಎರಡು ಕಣ್ಣುಗಳಿದ್ದಂತೆ ಎಂದು ಮಾಜಿ ಸಿಎಂ, ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಧರ್ಮ ಯುದ್ಧ ನಡೆಯುತ್ತಿದೆ. ಅಧರ್ಮ ರಾಜಕಾರಣಕ್ಕೆ ಉತ್ತರ ಕೊಡಲು ಮಂಜುನಾಥ್ ಅವರನ್ನು ಕಣಕ್ಕಿಳಿಸಿದ್ದೇವೆ ಎಂದು ಹೇಳಿದರು.
ನನ್ನ ಹೃದಯ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿದೆ. ನಾನು ರಾಮನಗರ ಬಿಟ್ಟು ಹೋಗಲ್ಲ. ಇಂದು ಅನಿವಾರ್ಯವಾಗಿ ಬಿಜೆಪಿ ಜೊತೆಗೆ ಅಭಿವೃದ್ಧಿಗಾಗಿ ಕೈ ಜೋಡಿಸಿದ್ದೇವೆ. ಚನ್ನಪಟ್ಟಣ ಜನರು ದಯಮಾಡಿ ನನ್ನನ್ನು ಕ್ಷಮಿಸಬೇಕು ಎಂದರು.
ನಾನು ಏಪ್ರಿಲ್ 4ರಂದು ಮಂಡ್ಯದಲ್ಲಿ ನಾಮಪತ್ರ ಸಲ್ಲಿಸಿ ಬಳಿಕ ಇಲ್ಲಿಗೆ ಬರುತ್ತೇನೆ. ಅಂದು ಮಂಜುನಾಥ್ ಕೂಡ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಎಲ್ಲ ವಿಚಾರವನ್ನು ಪ್ರಸ್ತಾಪ ಮಾಡಲಿದ್ದೇನೆ ಎಂದು ಅವರು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth