ಚುನಾವಣೆ ಮೇಲೆ 'ಕೇಸರಿ' ಕಣ್ಣು: ನಾಲ್ಕು ರಾಜ್ಯಗಳ ಕಮಲ ಪಾಳಯಕ್ಕೆ ನೂತನ ಸಾರಥಿಗಳ ನೇಮಕ - Mahanayaka

ಚುನಾವಣೆ ಮೇಲೆ ‘ಕೇಸರಿ’ ಕಣ್ಣು: ನಾಲ್ಕು ರಾಜ್ಯಗಳ ಕಮಲ ಪಾಳಯಕ್ಕೆ ನೂತನ ಸಾರಥಿಗಳ ನೇಮಕ

04/07/2023


Provided by

ದೇಶದಲ್ಲಿ ಮುಂಬರುವ ಪ್ರಮುಖ ರಾಜ್ಯಗಳ ಚುನಾವಣೆಗಳು ಮತ್ತು 2024ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿ ಮಂಗಳವಾರ ನಾಲ್ಕು ರಾಜ್ಯಗಳಲ್ಲಿ ತನ್ನ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡಿದೆ.

ತೆಲಂಗಾಣದ ಬಿಜೆಪಿ ಅಧ್ಯಕ್ಷರಾಗಿ ಜಿ ಕಿಶನ್ ರೆಡ್ಡಿ, ಆಂಧ್ರಪ್ರದೇಶದ ರಾಜ್ಯಾಧ್ಯಕ್ಷರಾಗಿ ಡಿ ಪುರಂದೇಶ್ವರಿ, ಜಾರ್ಖಂಡ್‌ನ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಿಎಂ ಬಾಬುಲಾಲ್ ಮರಾಂಡಿ ಮತ್ತು ಪಂಜಾಬ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಸುನೀಲ್ ಜಾಖರ್ ಅವರನ್ನು ನೇಮಕ ಮಾಡಲಾಗಿದೆ. ವಿಶೇಷವೆಂದರೆ ಜಾಖರ್ ಈ ಹಿಂದೆ ಪಂಜಾಬ್‌ ನಲ್ಲಿ ಕಾಂಗ್ರೆಸ್‌ನ ರಾಜ್ಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ತೆಲಂಗಾಣದಲ್ಲಿ ಚುನಾವಣಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಈಟಾಲ ರಾಜೇಂದರ್ ಅವರನ್ನು ನೇಮಿಸುವುದಾಗಿ ಬಿಜೆಪಿ ಘೋಷಿಸಿತು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷದಲ್ಲಿ ಸಂಘಟನಾ ಪುನರ್ ರಚನೆಯ ಬಗ್ಗೆ ಚರ್ಚೆ ನಡೆದಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರ ರಾಜಧಾನಿಯಲ್ಲಿ ಸಚಿವರ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ ಒಂದು ದಿನದ ನಂತರ ಈ ಘೋಷಣೆ ಬಂದಿದೆ.

ತೆಲಂಗಾಣದ ಮೊದಲ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದ ಎಟೆಲಾ ರಾಜೇಂದರ್ ಅವರು ಕೆ ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿಯೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. 2021 ರವರೆಗೆ ಅದರೊಂದಿಗೆ ಇದ್ದರು‌. ನಂತರ ಅವರು ಬಿಜೆಪಿಗೆ ಸೇರಿದರು. ತೆಲುಗು ದೇಶಂ ಪಕ್ಷದ ಸ್ಥಾಪಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್.ಟಿ.ರಾಮರಾವ್ ಅವರ ಪುತ್ರಿ ಡಿ.ಪುರಂದೇಶ್ವರಿ ಅವರು ಆಂಧ್ರಪ್ರದೇಶ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಮುಂಬರುವ ದಿನಗಳಲ್ಲಿ ಸಂಪುಟ ಪುನಾರಚನೆಯಲ್ಲಿ ಕುಮಾರ್ ಅವರನ್ನು ಕೇಂದ್ರ ಸರ್ಕಾರದಲ್ಲಿ ಸಚಿವರಾಗಿ ಸೇರಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ಮೇ ತಿಂಗಳಲ್ಲಿ “ಪಂಜಾಬ್ ನಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ಭ್ರಾತೃತ್ವವನ್ನು” ಬೆಂಬಲಿಸಲು ಬಯಸುತ್ತೇನೆ ಎಂದು ಹೇಳಿ ಕಾಂಗ್ರೆಸ್ ತೊರೆದಿದ್ದ ಮಾಜಿ ಸಂಸದ ಸುನಿಲ್ ಕುಮಾರ್ ಜಾಖರ್ ಈಗ ಪಂಜಾಬ್ ನಲ್ಲಿ ಕೇಸರಿ ಪಕ್ಷವನ್ನು ಮುನ್ನಡೆಸಲಿದ್ದಾರೆ. ಅಶ್ವನಿ ಶರ್ಮಾ ಬದಲಿಗೆ ಜಖರ್ ಮತ್ತು ದೀಪಕ್ ಪ್ರಕಾಶ್ ಬದಲಿಗೆ ಬಾಬುಲಾಲ್ ಮರಾಂಡಿ ಸ್ಥಾನ ಪಡೆದಿದ್ದಾರೆ. ಮರಾಂಡಿ ಜಾರ್ಖಂಡ್ ನ ಮೊದಲ ಮುಖ್ಯಮಂತ್ರಿಯಾಗಿದ್ದರು ಮತ್ತು ಪ್ರಸ್ತುತ ಜಾರ್ಖಂಡ್ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ