ಬಂಗಾಳವನ್ನು ದೂಷಿಸಲು, ತೃಣಮೂಲ ನಾಯಕರನ್ನು ಬಂಧಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ಮಮತಾ ಬ್ಯಾನರ್ಜಿ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಕೋಲ್ಕತಾಗೆ ಭೇಟಿ ನೀಡುವ ಮುನ್ನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಕ್ಷವು ರಾಜ್ಯವನ್ನು ದೂಷಿಸಲು ಮತ್ತು ತನ್ನ ಪಕ್ಷದ ನಾಯಕರನ್ನು ಬಂಧಿಸಲು ಪ್ರಯತ್ನಿಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಸಂದೇಶ್ ಖಾಲಿ ಅಶಾಂತಿ ಮತ್ತು ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಈ ಹೇಳಿಕೆ ನೀಡಿದ್ದಾರೆ.
ಕೋಲ್ಕತ್ತಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಮತಾ ಬ್ಯಾನರ್ಜಿ, “ಬಂಗಾಳವನ್ನು ದೂಷಿಸುವ, ಬಂಗಾಳದ ಅಧಿಕಾರಿಗಳ ಖ್ಯಾತಿಯನ್ನು ಹಾಳುಮಾಡುವ ಪ್ರಯತ್ನ ನಡೆಯುತ್ತಿದೆ” ಎಂದಿದ್ದಾರೆ.
ತೃಣಮೂಲ ನಾಯಕರನ್ನು ಬಂಧಿಸಲು ಬಿಜೆಪಿ ಸೂಚನೆ ನೀಡಿದೆ ಎಂದು ಏಜೆನ್ಸಿಗಳು ಹೇಳುತ್ತಿವೆ ಎಂದು ನಾವು ಕೇಳಿದ್ದೀವಿ. ಏಜೆನ್ಸಿಯ ಹೆಸರನ್ನು ಬಳಸಿಕೊಂಡು ಅವರು ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಅನ್ನು ಬಲವಂತವಾಗಿ ಕಳುಹಿಸುತ್ತಿದ್ದಾರೆ” ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth