ಬಿಜೆಪಿಗೆ ಟಾಟಾ, ಗುಡ್ ಬೈ: ಜೆಡಿಎಸ್ ಗೆ ಹಾಯ್ ಹಾಯ್ | ಬಿಜೆಪಿ–ಬಜರಂಗದಳ ಮುಖಂಡರು ಜೆ.ಡಿ.ಎಸ್. ಸೇರ್ಪಡೆ
ಚಿಕ್ಕಮಗಳೂರು ಮತ್ತು ಮೂಡಿಗೆರೆ ತಾಲೂಕಿನಲ್ಲಿ ರಾಜಕೀಯ ಸಮೀಕರಣಗಳು ಬದಲಾಗುತ್ತಿದ್ದು, ಬಿಜೆಪಿಗೆ ತೀವ್ರ ಹಿನ್ನಡೆಯುಂಟಾಗಿದೆ. ಬಿಜೆಪಿ ಮತ್ತು ಬಜರಂಗದಳದ ಪ್ರಮುಖ ಮುಖಂಡರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಸಿದ್ಧತೆ ನಡೆಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಮುಖ ಬಿಜೆಪಿ ಮುಖಂಡ ವಿಜಯ್ ಕುಮಾರ್ ನೇತೃತ್ವದಲ್ಲಿ ಈ ರಾಜಕೀಯ ಬದಲಾವಣೆ ನಡೆಯುತ್ತಿದೆ.
ಕಟ್ಟರ್ ಹಿಂದೂವಾದಿ ಹಾಗೂ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಹಾಗೂ ಯೂತ್ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮಂಜು ಸೇರಿದಂತೆ ಹಲವರು ಕೈ-ಕಮಲ ತೊರೆಯುತ್ತಿದ್ದಾರೆ.
ಚಿಕ್ಕಮಗಳೂರು ಹಾಗೂ ಮೂಡಿಗೆರೆ ತಾಲೂಕುಗಳಿಂದ ಬಿಜೆಪಿ ಯುವ ಮೋರ್ಚಾ ಮಂಡಲದ ಪದಾಧಿಕಾರಿಗಳು ಹಾಗೂ ಒಟ್ಟು 200ಕ್ಕೂ ಅಧಿಕ ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರು ಅಧಿಕೃತವಾಗಿ ಜೆಡಿಎಸ್ ಸೇರಲಿದ್ದಾರೆ.
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವ / ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಹಾಗೂ ಭೋಜೇಗೌಡ ನೇತೃತ್ವದಲ್ಲಿ ಈ ಸೇರ್ಪಡೆ ಪ್ರಕ್ರಿಯೆ ಜರುಗಲಿದೆ.
ಚಿಕ್ಕಮಗಳೂರಿನಿಂದ 500ಕ್ಕೂ ಅಧಿಕ ಕಾರ್ಯಕರ್ತರು ನಾಳೆ ವಿಶೇಷ ವಾಹನಗಳ ಮೂಲಕ ಬೆಂಗಳೂರಿಗೆ ತೆರಳಿ ಜೆಡಿಎಸ್ ನಾಯಕರ ಸಮ್ಮುಖದಲ್ಲಿ ಪಕ್ಷದ ಬಾಬುದಾರಿಯನ್ನು ಸ್ವೀಕರಿಸಲಿದ್ದಾರೆ.
ಸ್ಥಳೀಯ ರಾಜಕಾರಣದಲ್ಲಿ ಈ ಬೆಳವಣಿಗೆಯು ಜೆಡಿಎಸ್ ಪಕ್ಷದ ಬಲವನ್ನು ಇನ್ನಷ್ಟು ಹೆಚ್ಚಿಸಲಿದೆ ಎಂದು ವಿಶ್ಲೇಷಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD

























