ಪ್ರಚಾರ ಮುಗಿಸಿ ಬಂದಿದ್ದ ಗ್ರಾ.ಪಂ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಹೃದಯಾಘಾತದಿಂದ ಸಾವು - Mahanayaka
2:02 AM Thursday 30 - November 2023

ಪ್ರಚಾರ ಮುಗಿಸಿ ಬಂದಿದ್ದ ಗ್ರಾ.ಪಂ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಹೃದಯಾಘಾತದಿಂದ ಸಾವು

23/12/2020

ನೆಲ್ಯಾಡಿ: ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದ ನೆಲ್ಯಾಡಿ ಗ್ರಾ.ಪಂ.ನ 2ನೇ ವಾರ್ಡ್ ನ ಅಭ್ಯರ್ಥಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದ್ದು, ತಡರಾತ್ರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ನೆಲ್ಯಾಡಿ ಗ್ರಾಮದ ಮೊರಂಕಳ ನಿವಾಸಿ ಅಬ್ದುಲ್ ಹಮೀದ್ ಪೈಂಟರ್(60)   ಹೃದಯಾಘಾತದಿಂದ ಮೃತಪಟ್ಟವರಾಗಿದ್ದಾರೆ. ಡಿಸೆಂಬರ್ 22ರಂದು ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಅವರಿಗೆ ತಡರಾತ್ರಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಮನೆಯವರು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ದರಾದರೂ ದಾರಿ ಮಧ್ಯೆ ಅವರು ನಿಧನರಾಗಿದ್ದಾರೆ.

ಅಬ್ದುಲ್ ಹಮೀದ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದು, ಕಳೆದ ಅವಧಿಯಲ್ಲಿ ನೆಲ್ಯಾಡಿ ಗ್ರಾ.ಪಂ. ನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾಗಿದ್ದರು. ಈ ವರ್ಷ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದು,  ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಡಿ.27ರಂದು ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಅವರು ಪ್ರಚಾರದಲ್ಲಿ ತೊಡಗಿದ್ದರು. ಈ ನಡುವೆ ಅವರು ನಿಧನರಾಗಿದ್ದಾರೆ.

ಇತ್ತೀಚಿನ ಸುದ್ದಿ