1:35 AM Monday 15 - September 2025

ಬಿಜೆಪಿ ಪಕ್ಷದ ಬಂಟಿಂಗ್ಸ್ ನಲ್ಲಿ ಸಿಲುಕಿಕೊಂಡು ಕೋತಿಯ ದಾರುಣ ಸಾವು

monky
03/02/2023

ದೊಡ್ಡಬಳ್ಳಾಪುರ: ಬಿಜೆಪಿ ಪಕ್ಷದ ಬಂಟಿಂಗ್ಸ್ ಗೆ ಸಿಲುಕಿದ ಕೋತಿಯೊಂದು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರೂಡಿಯಲ್ಲಿ ನಡೆದಿದೆ.

ಚುನಾವಣೆ ಹಿನ್ನೆಲೆಯಲ್ಲಿಯಲ್ಲಿ  ಮರದಲ್ಲಿ ಹಾಕಿದ್ದ ಬಂಟಿಂಗ್ಸ್ ಗೆ ಕೋತಿ ಆಕಸ್ಮಿಕವಾಗಿ ಸುತ್ತಿಕೊಂಡಿದ್ದು, ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಕೋತಿಯ ಮೃತದೇಹ ಪತ್ತೆಯಾಗಿದೆ.

ಬಂಟಿಂಗ್ಸ್ ನಲ್ಲಿ ಕೋತಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಸುತ್ತಿಕೊಂಡು ಕೋತಿ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

ಬಂಟಿಂಗ್ಸ್ ಗಳನ್ನು ಕಟ್ಟಿ ಕಾರ್ಯಕ್ರಮ ಮುಗಿದ ಬಳಿಕ ಅದನ್ನು ತೆರವುಗೊಳಿಸುವ ಕೆಲಸವಾಗುತ್ತಿಲ್ಲ. ಇದರಿಂದಾಗಿ ಮೂಕ ಪ್ರಾಣಿಯೊಂದು ಬಲಿಯಾಗಿದೆ ಅನ್ನೋ ಆಕ್ರೋಶದ ಮಾತುಗಳು ಕೇಳಿ ಬಂದಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version