ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ  ಕೋಟಿ ಕೋಟಿ ಆಸ್ತಿಯ ಒಡೆಯನಾದರೂ ಸ್ವಂತ ಕಾರು ಇಲ್ಲ! - Mahanayaka

ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ  ಕೋಟಿ ಕೋಟಿ ಆಸ್ತಿಯ ಒಡೆಯನಾದರೂ ಸ್ವಂತ ಕಾರು ಇಲ್ಲ!

bharath bommai
24/10/2024

ಹಾವೇರಿ: ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಗುರುವಾರ ನಾಮಪತ್ರ ಸಲ್ಲಿಸಿದರು.

ಚುನಾವಣಾಧಿಕಾರಿಗೆ ನಾಮಪತ್ರದೊಂದಿಗೆ ಅವರು ತಮ್ಮ ಆಸ್ತಿ ಮೌಲ್ಯವನ್ನು ಘೋಷಿಸಿಕೊಂಡಿದ್ದಾರೆ.

ಭರತ್ ವಿವಿಧ ಬ್ಯಾಂಕ್‌, ಹಣಕಾಸು ಸಂಸ್ಥೆಗಳಲ್ಲಿ 4.05 ಲಕ್ಷ ನಿಶ್ಚಿತ ಠೇವಣಿ, ಉಳಿತಾಯ ಖಾತೆಗಳಲ್ಲಿ 1.19 ಕೋಟಿ ರೂ. ಹೊಂದಿದ್ದಾರೆ. ಸಾರ್ವಜನಿಕ ಕಂಪನಿಗಳಲ್ಲಿ 1.74 ಲಕ್ಷ, ಖಾಸಗಿ ಕಂಪನಿಗಳಲ್ಲಿ 50,000, ಪಾಲುದಾರಿಕೆಯಲ್ಲಿ 1.23 ಕೋಟಿ ರೂ. ಬಂಡವಾಳ ತೊಡಗಿಸಿದ್ದಾರೆ. ಗೋಲ್ಡ್‌ ಚಿಟ್‌ ಫಂಡ್‌ ನಲ್ಲಿ 70 ಸಾವಿರ, ಮ್ಯೂಚುವಲ್‌ ಫಂಡ್‌ ನಲ್ಲಿ 10.20 ಲಕ್ಷ ಹೂಡಿಕೆ ಮಾಡಿದ್ದಾರೆ. 81.61 ಲಕ್ಷ ಮೌಲ್ಯದ ಚಿನ್ನಾಭರಣ ಹೊಂದಿರುವ ಇವರ ಬಳಿ ಯಾವುದೇ ವಾಹನವಿಲ್ಲ. ಇನ್ನಿತರ ಆದಾಯ, ಬಡ್ಡಿ ಸೇರಿದಂತೆ ಒಟ್ಟು 3.79 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ.

ಇನ್ನು ಬೆಂಗಳೂರಿನ ಆರ್‌.ಟಿ ನಗರದಲ್ಲಿ ಒಂದು ವಾಸದ ಮನೆ, ಬೆಂಗಳೂರಿನ ಸೆಂಚುರಿ ಎಥೋಸ್‌ ಅಪಾರ್ಟ್‌ಮೆಂಟ್‌ನಲ್ಲಿ ಪ್ಲಾಟ್‌ ಸೇರಿದಂತೆ 5.50 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.

ಪತ್ನಿ ಇಬ್ಬನಿ ಬಳಿ 1.43 ಲಕ್ಷ ನಗದು ಹಣ, ವಿವಿಧ ಬ್ಯಾಂಕುಗಳಲ್ಲಿ ನಿಶ್ಚಿತ ಠೇವಣಿ, ಉಳಿತಾಯ ಖಾತೆಗಳಲ್ಲಿ 56.32 ಲಕ್ಷ ಹೊಂದಿದ್ದಾರೆ. ವಿವಿಧ ಕಂಪನಿಗಳಲ್ಲಿ 33.75 ಲಕ್ಷ ಬಂಡವಾಳ ಹೂಡಿಕೆ ಮಾಡಿದ್ದು, ಪಾಲುದಾರಿಕೆ ವ್ಯವಹಾರದಲ್ಲಿ 31.12 ಲಕ್ಷ ತೊಡಗಿಸಿದ್ದಾರೆ. ಇವರ ಬಳಿ ಮಾರುತಿ ಸ್ವಿಫ್ಟ್‌ ಕಾರು ಇದ್ದು, 8.16 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಒಟ್ಟು 3.64 ಕೋಟಿ ಮೌಲ್ಯದ ಸ್ಥಿರಾಸ್ತಿಯಿದೆ. ಬೆಂಗಳೂರಿನ ತಾವರೆಕೆರೆ ಹೋಬಳಿ ಅಜ್ಜನಹಳ್ಳಿ ಗ್ರಾಮದಲ್ಲಿ ಒಂದು ಸೈಟ್‌, ಕೆಂಗೇರಿಯಲ್ಲಿ ಕೆಎಚ್‌ಬಿ ನಿವೇಶನ ಹಾಗೂ ಸೆಂಚುರಿ ಎಥೋಸ್‌ ಅಪಾರ್ಟ್‌ಮೆಂಟ್‌ನಲ್ಲಿ ಪ್ಲಾಟ್‌ ಸೇರಿದಂತೆ 2.83 ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಇವರ ಪುತ್ರನ ಬಳಿ 40.47 ಲಕ್ಷ ಮೌಲ್ಯದ ಚರಾಸ್ತಿಯಿದೆ. ಒಟ್ಟು ಭರತ್‌ ಬೊಮ್ಮಾಯಿ ಅವರು 16.17 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ