11:14 PM Saturday 15 - November 2025

ನಾಳೆ ಅಥವಾ ನಾಡಿದ್ದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಸಿಎಂ ಬೊಮ್ಮಾಯಿ ಘೋಷಣೆ

cm bommai
10/04/2023

ದೆಹಲಿ : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್​ ಆಗಿದೆ. ಆದರೆ ಬಿಜೆಪಿ ಮಾತ್ರ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲು ವಿಳಂಬ ಮಾಡುತ್ತಿದೆ. ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳುತ್ತಿರುವಾಗಲೇ ಸಿಎಂ ಬೊಮ್ಮಾಯಿ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲಿದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಇಂದು ಈ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಅಥವಾ ನಾಡಿದ್ದು ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂದು ಹೇಳಿದ್ದಾರೆ. ಇಂದು ಸಂಜೆ ನಾಲ್ಕು ಗಂಟೆ ಬಳಿಕ ದೆಹಲಿಯಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ನಿವಾಸದಲ್ಲಿ ರಾಜ್ಯ ನಾಯಕರು ಮತ್ತೊಂದು ಸುತ್ತಿನ ಸಭೆ ನಡೆಸಲಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯು ಹೊಸ ಮುಖಗಳಿಗೆ ಅವಕಾಶ ನೀಡಲು ಮುಂದಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದು ತಡವಾಗುತ್ತಿದೆ ಎನ್ನಲಾಗಿದೆ. ಈ ಸಭೆ ಮುಕ್ತಾಯದ ಬಳಿಕ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version