ಮತ್ತೆ ಎನ್ ಡಿಎ ತೆಕ್ಕೆಗೆ ಚಿರಾಗ್ ಪಾಸ್ವಾನ್..? ಎನ್ ಡಿಎ ಮೈತ್ರಿಕೂಟದಲ್ಲಿ ಕೈ ಜೋಡಿಸ್ತಾರ ಎಲ್‌ಜೆಪಿ ನಾಯಕ..?

ಜುಲೈ 18ರಂದು ನಡೆಯಲಿರುವ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ಸಭೆಯಲ್ಲಿ ಲೋಕಜನಶಕ್ತಿ ಪಕ್ಷದ (ರಾಮ್‌ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇಂದ್ರ ಸಚಿವ ನಿತ್ಯಾನಂದ ರಾಯ್ ಅವರು ಈಗಾಗಲೇ ಚಿರಾಗ್ ಪಾಸ್ವಾನ್ ಅವರನ್ನು ಎರಡನೇ ಬಾರಿಗೆ ಭೇಟಿ ಮಾಡಿದ್ದಾರೆ. ಇದೇ ವೇಳೆ ಎನ್‌ಡಿಎ ಸಭೆಯಲ್ಲಿ ಭಾಗವಹಿಸುವಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಯುವ ನಾಯಕನಿಗೆ ಬರೆದ ಪತ್ರವನ್ನು ಎಲ್‌ಜೆಪಿ (ಆರ್) ಹಂಚಿಕೊಂಡಿದೆ.
ಪ್ರಾದೇಶಿಕ ಪಕ್ಷವನ್ನು ಎನ್‌ಡಿಎಯ ಪ್ರಮುಖ ಘಟಕವೆಂದು ಹೇಳಿರುವ ನಡ್ಡಾ, ಬಡವರ ಅಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿರುವ ಮೋದಿ ಸರ್ಕಾರದ ಪ್ರಮುಖ ಪಾಲುದಾರ ಎಲ್‌ಜೆಪಿ (ಆರ್) ಎಂದು ಹೇಳಿದ್ದಾರೆ.
2020 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಪ್ರಚಾರಕ್ಕಾಗಿ ಬಿಹಾರದಲ್ಲಿ ಮೈತ್ರಿಯಿಂದ ಹೊರನಡೆದ ನಂತರ ದಿವಂಗತ ದಲಿತ ನಾಯಕ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರನ್ನು ಮತ್ತೆ ಎನ್‌ಡಿಎ ತೆಕ್ಕೆಗೆ ತರಲು ಬಿಜೆಪಿಯ ಪ್ರಯತ್ನಿಸುತ್ತಿದೆ.
ಈಗ ಕೇಂದ್ರ ಸಚಿವರಾಗಿರುವ ಅವರ ಚಿಕ್ಕಪ್ಪ ಪಶುಪತಿ ಕುಮಾರ್ ಪಾರಸ್ ನೇತೃತ್ವದಲ್ಲಿ ಎಲ್‌ಜೆಪಿಯಲ್ಲಿನ ವಿಭಜನೆಯು ಅವರನ್ನು ದುರ್ಬಲಗೊಳಿಸಿದೆ. ಚಿರಾಗ್ ಪಾಸ್ವಾನ್ ಪಕ್ಷದ ನಿಷ್ಠಾವಂತ ಮತಬ್ಯಾಂಕನ್ನು ತಮ್ಮೊಂದಿಗೆ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಅದು ರಾಜ್ಯದಲ್ಲಿ ಬಿಜೆಪಿಗೆ ತನ್ನ ಪ್ರಾಮುಖ್ಯತೆಯನ್ನು ಸೂಚಿಸುತ್ತದೆ. ಆರ್‌ಜೆಡಿ, ಜೆಡಿಯು, ಕಾಂಗ್ರೆಸ್ ಮತ್ತು ಎಡಪಕ್ಷಗಳ ಒಕ್ಕೂಟವು ಬಿಜೆಪಿ ವಿರುದ್ಧ ಕಣಕ್ಕಿಳಿದಿವೆ. ಪ್ರಮುಖ ವಿಷಯಗಳಲ್ಲಿ ಅವರು ಬಿಜೆಪಿಯನ್ನು ಬೆಂಬಲಿಸುವಲ್ಲಿ ದೃಢವಾಗಿ ನಿಂತಿದ್ದಾರೆ.
ಅಂದಹಾಗೇ ಎನ್ ಡಿಎ ಸಭೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಬಣ, ಬಿಹಾರ ಮತ್ತು ಉತ್ತರ ಪ್ರದೇಶದ ಹಲವಾರು ಸಣ್ಣ ಪಕ್ಷಗಳು ಮತ್ತು ಈಶಾನ್ಯ ರಾಜ್ಯಗಳ ಪ್ರಾದೇಶಿಕ ಪಕ್ಷಗಳು ಸೇರಿದಂತೆ ಹಲವಾರು ಹೊಸ ಬಿಜೆಪಿ ಮಿತ್ರಪಕ್ಷಗಳು ಭಾಗವಹಿಸುವ ಸಾಧ್ಯತೆ ಇದೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಕೂಡ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂಬ ಮಾತುಗಳು ಕೂಡಾ ಕೇಳಿ ಬರುತ್ತಿದೆ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw