ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ರಾಜ್ಯಪಾಲರಿಗೆ ಬಿಜೆಪಿ ದೂರು - Mahanayaka

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ರಾಜ್ಯಪಾಲರಿಗೆ ಬಿಜೆಪಿ ದೂರು

b nagendra
06/06/2024

ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವಂತೆ ಒತ್ತಾಯಿಸಿ ರಾಜ್ಯ ಬಿಜೆಪಿ ಘಟಕ ರಾಜ್ಯಪಾಲರಿಗೆ ದೂರು ನೀಡಿದೆ.


Provided by

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ಅವ್ಯವಹಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ನಾಗೇಂದ್ರ ಅವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ನೇತೃತ್ವದಲ್ಲಿ ಪಾದಯಾತ್ರೆ ನಡೆಸಿದ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ನೀಡಲಾಗಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಬಿಐ ತನಿಖೆ ಆರಂಭಿಸಿದ ಬೆನ್ನಲ್ಲೇ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಸಿಎಂ ಸಿದ್ದರಾಮಯ್ಯ ನಾನು ಸಚಿವ ನಾಗೇಂದ್ರರ ಬಳಿ ರಾಜೀನಾಮೆ ಕೇಳಿಲ್ಲ, ಕರೆದು ಮಾತನಾಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು. ಇದೀಗ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟು ಹಿಡಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ