11:41 AM Tuesday 14 - October 2025

ಬಿಜೆಪಿ-ಕಾಂಗ್ರೆಸ್-ಜೆಡಿಎಸ್ ಎಷ್ಟು ಸ್ಥಾನಗಳಲ್ಲಿ ಮುನ್ನಡೆ? | ಇಲ್ಲಿದೆ ಮಾಹಿತಿ

30/12/2020

ಬೆಂಗಳೂರು:  ರಾಜ್ಯದಲ್ಲಿ ಎರಡು ಹಂತದಲ್ಲಿ ನಡೆದ ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, 5,255 ಪಂಚಾಯತ್ ಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರೆ, 3,090 ಪಂಚಾಯತ್ ಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ.

ಇನ್ನೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಕೂಡ ಹೆಚ್ಚಿನ ಮುನ್ನಡೆಯನ್ನು ಸಾಧಿಸಿದ್ದು,  4,565 ಪಂಚಾಯತ್ ಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.  ಕೊವಿಡ್ ನಿಯಮಗಳ ಪಾಲನೆ ಮಾಡುತ್ತಲೇ ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಆದರೂ, ವಿವಿಧ ಕಡೆಗಳಲ್ಲಿ ಜನರು ಮಾಸ್ಕ್ ಹಾಕದೇ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡು ಬಂದಿದೆ.

ಜನರು ಗುಂಪುಗೂಡದಂತೆ ಎಚ್ಚರಿಕೆ ವಹಿಸಲಾಗಿದೆ. ಗೆದ್ದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ವಿಜಯೋತ್ಸವ ನಡೆಸುವಂತಿಲ್ಲ ಎಂದು ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಇನ್ನೂರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ  ಮೊದಲ ಹಂತದಲ್ಲಿ ಶೇ.82.04, ಎರಡನೇ ಹಂತದಲ್ಲಿ ಶೇ.80.71ರಷ್ಟು ಮತದಾನವಾಗಿತ್ತು.

ಇತ್ತೀಚಿನ ಸುದ್ದಿ

Exit mobile version