ಗಾಂಧಿ ಕುಟುಂಬದ ಕುಡಿ ಎಂಬ ಕಾರಣದಿಂದಲೇ ವರುಣ್‌ ಗಾಂಧಿಗೆ ಟಿಕೆಟ್ ನಿರಾಕರಿಸಿತೇ ಬಿಜೆಪಿ..?

27/03/2024

ಬಿಜೆಪಿ ಟಿಕೆಟ್ ವಂಚಿತರಾಗಿರುವ ವರುಣ್ ಗಾಂಧಿಗೆ ಕಾಂಗ್ರೆಸ್ ಆಹ್ವಾನ ನೀಡಿದೆ. ಗಾಂಧಿ ಕುಟುಂಬದ ಕುಡಿ ಎಂಬ ಕಾರಣದಿಂದಲೇ ಬಿಜೆಪಿ ವರುಣ್ ಗಾಂಧೀಗೆ ಟಿಕೆಟ್ ನಿರಾಕರಿಸಿದೆ ಎಂದು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಅವರು ಕಾಂಗ್ರೆಸ್ ಗೆ ಬರುವುದರಿಂದ ಖುಷಿ ಇದೆ. ಅವರು ಒಳ್ಳೆಯ ಶಿಕ್ಷಿತ ರಾಜಕಾರಣಿ. ಅವರಿಗೂ ಗಾಂಧಿ ಕುಟುಂಬಕ್ಕೂ ಸಂಬಂಧ ಇದೆ. ಈ ಸಂಬಂಧವೇ ಬಿಜೆಪಿಗೆ ಇರಿಸು ಮುರಿಸು ತಂದಿದೆ. ಆ ಕಾರಣದಿಂದಲೇ ಟಿಕೆಟ್ ನಿರಾಕರಿಸಿದೆ ಎಂದು ಚೌದರಿ ಹೇಳಿದ್ದಾರೆ.

ವರುಣ್ ಗಾಂಧಿಯವರು ಉತ್ತರಪ್ರದೇಶದ ಪಿಲಿಬಿತ್ ನಿಂದ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಜಯಗಳಿಸಿದ್ದರು. ಈ ಬಾರಿ ಬಿಜೆಪಿ ಅವರಿಗೆ ಟಿಕೆಟ್ ನಿರಾಕರಿಸಿದೆ. ರೈತ ಪ್ರತಿಭಟನೆಯ ವೇಳೆ ಕೇಂದ್ರ ಸರಕಾರದ ನೀತಿಯ ವಿರುದ್ಧ ವರುಣ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದರು. ಮಾತ್ರ ಅಲ್ಲ ರೈತರ ಪರ ನಿಂತಿದ್ದರು. ಇದೀಗ ಕಾಂಗ್ರೆಸ್ಸಿನಿಂದ ಬಿಜೆಪಿ ಸೇರಿರುವ ಜಿತಿನ್ ಪ್ರಸಾದ್ ಅವರನ್ನು ಬಿಜೆಪಿ ನಲ್ಲಿ ತನ್ನ ಅಭ್ಯರ್ಥಿಯಾಗಿ ನಿಲ್ಲಿಸಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version