6:51 AM Wednesday 15 - October 2025

ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಕಾಂಗ್ರೆಸ್ ನಿಂದ ವಿವಾದಾತ್ಮಕ ಹೇಳಿಕೆ

congress vs bjp
26/08/2021

ಮೈಸೂರು: ಚಾಮುಂಡಿ ಬೆಟ್ಟದ ಸಮೀಪ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ತೀವ್ರ ಆಕ್ರೋ ವ್ಯಕ್ತಪಡಿಸಿದ್ದು,  ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಯುವತಿಯನ್ನು ಅತ್ಯಾಚಾರವೆಸಗಿದ ಮಾಜಿ ಸಚಿವರ ರಕ್ಷಣೆ ನಿಂತಂತೆ ಬಿಜೆಪಿ ಮೈಸೂರಿನ ಅತ್ಯಾಚಾರಿಗಳ ರಕ್ಷಣೆಯನ್ನೂ ಮಾಡುವಂತಿದೆ ಅತ್ಯಾಚಾರಿ ಶಾಸಕ, ಮಾಜಿ ಸಚಿವರನ್ನು ಹೊಂದಿದ ಬಿಜೆಪಿಗೆ ಅತ್ಯಾಚಾರಿಗಳೆಂದರೆ ಹೆಚ್ಚು ಪ್ರೀತಿ! ಸಿದ್ದು ಸವದಿಯನ್ನ ರಕ್ಷಿಸಿದ ಮಹಿಳಾ ವಿರೋಧಿ ಬಿಜೆಪಿಯಿಂದ ಮಹಿಳೆಯರು ರಕ್ಷಣೆ ಬಯಸುವುದು ವ್ಯರ್ಥ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಮೈಸೂರಿನಂತಹ ನಗರದಲ್ಲಿ ಅತ್ಯಾಚಾರ ಪ್ರಕರಣ ನಡೆದು 24 ಗಂಟೆಗೂ ಅಧಿಕ ಸಮಯ ಕಳೆದಿದ್ದರೂ ಆರೋಪಿಗಳನ್ನು ಬಂಧಿಸಲಾಗದ್ದು ಆಡಳಿತದಲ್ಲಿ ಗೃಹ ಇಲಾಖೆಯ ಕಾರ್ಯಕ್ಷಮತೆ ಕುಸಿದಿರುವುದಕ್ಕೆ ಸಾಕ್ಷಿ. ಇದುವರೆಗೂ ಗೃಹಸಚಿವರು, ಬಿಜೆಪಿಯ ಮಹಿಳಾ ನಾಯಕಿಯರು ಸಂತ್ರಸ್ತೆಯನ್ನು ಭೇಟಿಯಾಗದಿರುವುದು ಬಿಜೆಪಿಯ ನಿರ್ಲಕ್ಷ್ಯ ಧೋರಣೆಗೆ ನಿದರ್ಶನ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಇನ್ನಷ್ಟು ಸುದ್ದಿಗಳು…

ಕಾರನ್ನು ನೀರಿಗೆ ಹಾರಿಸಿ ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ | ಇಬ್ಬರು ನೀರುಪಾಲು

ಕಾಬೂಲ್ ವಿಮಾನ ನಿಲ್ದಾಣದ ಕಡೆ ಹೋಗಬೇಡಿ | ತನ್ನ ಪ್ರಜೆಗಳಿಗೆ ಎಚ್ಚರಿಕೆ ನೀಡಿದ ಆಸ್ಟ್ರೇಲಿಯಾ

1ರಿಂದ 8ನೇ ತರಗತಿಯವರೆಗೆ ಶಾಲೆ ಆರಂಭವಾಗುವುದು ಯಾವಾಗ? | ಸುಳಿವು ನೀಡಿದ ಸಚಿವ ಬಿ.ಸಿ.ನಾಗೇಶ್

ಮೈಸೂರು: ಬೀದಿ ದೀಪಗಳಿಲ್ಲದ ಕತ್ತಲ ಪ್ರದೇಶ ಅತ್ಯಾಚಾರಿಗಳಿಗೆ ಅನುಕೂಲವಾಗುತ್ತಿದೆಯೇ? | ಸಾರ್ವಜನಿಕರು ಹೇಳುತ್ತಿರುವುದೇನು?

ಬ್ರೇಕಿಂಗ್ ನ್ಯೂಸ್:  ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಮೂವರು ಶಂಕಿತ ಆರೋಪಿಗಳ ಬಂಧನ

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

Exit mobile version