ಬಿಜೆಪಿಗೆ ಬರುತ್ತೇನೆ ಅಂದ್ರೂ ಸಿಎಂ ಇಬ್ರಾಹಿಂ ಅವರನ್ನು ಸೇರಿಸಿಕೊಳ್ಳುವುದಿಲ್ಲ: ಸಚಿವ ಕೆ.ಎಸ್‌.ಈಶ್ವರಪ್ಪ - Mahanayaka

ಬಿಜೆಪಿಗೆ ಬರುತ್ತೇನೆ ಅಂದ್ರೂ ಸಿಎಂ ಇಬ್ರಾಹಿಂ ಅವರನ್ನು ಸೇರಿಸಿಕೊಳ್ಳುವುದಿಲ್ಲ: ಸಚಿವ ಕೆ.ಎಸ್‌.ಈಶ್ವರಪ್ಪ

eshwarappa
04/02/2022

ಶಿವಮೊಗ್ಗ: ಸಿಎಂ ಇಬ್ರಾಹಿಂ ಅವರನ್ನು ಬಿಜೆಪಿಗೆ ಯಾವುದೇ ಕಾರಣಕ್ಕೂ ಸೇರಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್‌. ಈಶ್ವರಪ್ಪ,ಸಿಎಂ ಇಬ್ರಾಹಿಂ ಬಿಜೆಪಿಗೆ ಬರುತ್ತೇನೆ ಎಂದರೆ ಯಾವುದೇ ಕಾರಣಕ್ಕೂ ಸೇರಿಸಿಕೊಳ್ಳುವುದಿಲ್ಲ. ನಮ್ಮ ಪಕ್ಷದೊಳಗೆ ಅವರ ಹೆಜ್ಜೆಯ ಧೂಳು ಕೂಡ ತಗೆದುಕೊಳ್ಳುವುದಿಲ್ಲ. ಸಿಎಂ ಇಬ್ರಾಹಿಂ ಏನು ಎಂಬುದು ನನಗೆ ಗೊತ್ತಿದೆ. ಅವರು ಎಷ್ಟರ ಮಟ್ಟಿಗೆ ಅನ್ಯಾಯ ಮಾಡಿದ್ದಾರೆ ಎನ್ನುವುದೂ ಗೊತ್ತು. ಅವರನ್ನು ಮಂತ್ರಿಮಂಡಲದಿಂದ ತೆಗೆಯುವವರೆಗೆ ಬಿಜೆಪಿ ಹೋರಾಟ ಮಾಡಿತ್ತು. ಬಿಜೆಪಿಯ ಒತ್ತಾಯದಿಂದಲೇ ಅವರನ್ನು ಕಿತ್ತೆಸೆಯಲಾಗಿತ್ತು ಎಂದರು.

ಭದ್ರಾವತಿಯಲ್ಲಿ ಅವರ ಅಣ್ಣ- ತಮ್ಮಂದಿರು ಏನೇನು ಅನ್ಯಾಯ ಮಾಡಿದ್ದಾರೆ ಎಂಬುದು ಜಿಲ್ಲೆಯ, ರಾಜ್ಯದ ಜನರಿಗೆ ಗೊತ್ತಿದೆ. ಹೀಗಾಗಿ, ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಇದುವರೆಗೂ ಅವರೇನೂ ಬಿಜೆಪಿಗೆ ಸೇರುವ ಬಗ್ಗೆ ಮಾತನಡಿಲ್ಲ.ಮಾಧ್ಯಮದವರು ನೀವು ಕೇಳಿದಕ್ಕೆ ಹೇಳುತ್ತಿದ್ದೇನೆ ಎಂದು ಅವರು ಹೇಳಿದರು.

ಉಡುಪಿ, ಭದ್ರಾವತಿ ಸೇರಿದಂತೆ ಕೆಲವು ಕಾಲೇಜುಗಳಲ್ಲಿ ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ನಮ್ಮ ರಾಜ್ಯದಲ್ಲಿ ಹಿಂದೂ- ಮುಸ್ಲಿಮರು ಅಣ್ಣ ತಮ್ಮಂದಿರಂತೆ ಒಟ್ಟಾಗಿ ಬದುಕುತ್ತಿರುವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಗೊಂದಲ ಉಂಟು ಮಾಡುವ ಪ್ರಯತ್ನ ನಡೆಯುತ್ತಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಶಾಲೆ ಕಾಲೇಜುಗಳ ಆಡಳಿತ ಮಂಡಳಿಗಳು ಸೂಕ್ತ ನಿರ್ಧಾರ ಕೈಗೊಂಡು ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಗಂಡನನ್ನು ಆನ್ ಲೈನ್ ಸೈಟ್ ನಲ್ಲಿ ಮಾರಾಟಕ್ಕಿಟ್ಟ ಪತ್ನಿ!

ವೃದ್ಧೆ ಬದುಕಿರುವಾಗಲೇ ಮರಣ ಪತ್ರ ನೀಡಿದ ಅಧಿಕಾರಿಗಳು

ಮುಸ್ಲಿಂ ವಿದ್ಯಾರ್ಥಿನಿಯರಿಗೆ ಕಾಲೇಜು ಗೇಟ್ ಹಾಕಿರುವುದು ಸಂವಿಧಾನ ವಿರೋಧಿ: ಸಿದ್ದರಾಮಯ್ಯ

ಮಾ.12ಕ್ಕೆ ನಿಗದಿಯಾಗಿದ್ದ ನೀಟ್‌ ಪಿಜಿ ಪರೀಕ್ಷೆ ಮುಂದೂಡಿಕೆ

ಓಮಸತ್ವ, ಕಸ್ತೂರಿ ಮಾರಾಟ ಮಾಡುವ ನೆಪದಲ್ಲಿ ಮಹಿಳೆಯ ಅತ್ಯಾಚಾರ ಯತ್ನ

 

ಇತ್ತೀಚಿನ ಸುದ್ದಿ