ಹಿಂದೂ ವಿರೋಧಿ ಬಿಜೆಪಿಗೆ ಸರಿಯಾದ ಉತ್ತರ ನೀಡುತ್ತೇವೆ: ಚುನಾವಣೆ ಸಮೀಪಿಸುತ್ತಿರುವಾಗಲೇ ಹಿಂದೂ ಮಹಾಸಭಾ ಹೇಳಿಕೆ - Mahanayaka
3:42 AM Monday 15 - September 2025

ಹಿಂದೂ ವಿರೋಧಿ ಬಿಜೆಪಿಗೆ ಸರಿಯಾದ ಉತ್ತರ ನೀಡುತ್ತೇವೆ: ಚುನಾವಣೆ ಸಮೀಪಿಸುತ್ತಿರುವಾಗಲೇ ಹಿಂದೂ ಮಹಾಸಭಾ ಹೇಳಿಕೆ

hindu mahasabha
28/12/2022

ಬಿಜೆಪಿ ಸರ್ಕಾರ ಬಂದ ಮೇಲೆ ಹಿಂದೂ ಕಾರ್ಯಕರ್ತರು, ನಾಯಕರನ್ನು ಜೈಲಿಗೆ ಕಳಿಸಲಾಗುತ್ತಿದೆ. ಸಾಕ್ಷಿ ಇಲ್ಲದೆ ಇದ್ದರೂ, ಪ್ರಕರಣ ದಾಖಲಿಸಿ ಜೈಲಿಗೆ ಹಾಕಿಸುವ ಕೃತ್ಯವು ನಡೆಯುತ್ತಿದೆ ಎಂದು ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು.


Provided by

ಮಂಗಳೂರು ನಗರದ ಖಾಸಗಿ ಹೊಟೇಲ್ ನಲ್ಲಿ ಮಾತನಾಡಿದ ಅವರು, ಹಿಂದೂ ಮಹಾಸಭಾ ನಾಯಕರ ಮೇಲೆ ದಬ್ಬಾಳಿಕೆ ಹೆಚ್ಚಿದೆ. ಸುರತ್ಕಲ್ ಠಾಣೆ ವ್ಯಾಪ್ತಿಯಲ್ಲಿ ಸುಲಿಗೆ, ಬೆದರಿಕೆ ಪ್ರಕರಣಗಳನ್ನು ದಾಖಲಿಸಿ ಜೈಲಿಗೆ ಹಾಕಲು ಯತ್ನಿಸಿಸಿದವರಿಗೆ ನ್ಯಾಯಾಲಯವು ಛೀಮಾರಿ ಹಾಕಿ ಬೇಲ್ ನೀಡಿದೆ. ಪರ್ಯಾಯ ವ್ಯವಸ್ಥೆ ಬಗ್ಗೆ ಹಿಂದೂ ಮಹಾ ಸಭಾ ಧ್ವನಿ ಎತ್ತುತ್ತಿದೆ. ಹಿಂದೂ ವಿರೋಧಿ ಸರ್ಕಾರಗಳಿಗೆ ತಕ್ಕ ಪಾಠ ಕಲಿಸಲು 224 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲಾಗುತ್ತದೆ ಎಂದು‌ ತಿಳಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಹಿಂದೂ ವಿರೋಧಿ ಬಿಜೆಪಿಗೆ ಸರಿಯಾದ ಉತ್ತರ ನೀಡುತ್ತೇವೆ. ಹಿಂದೂ ನಾಯಕರುಗಳು ಅಧಿಕಾರ ಹಿಡಿಯಲು ಹಿಂದೂ ಮಹಾ ಸಭಾ ವೇದಿಕೆ ಕಲ್ಪಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಬಿಜೆಪಿ, ಸಂಘದ ನಾಯಕರು ಹಿಂದೂ ಮಹಾ ಸಭಾಕ್ಕೆ ಸೇರುತ್ತಿದಾರೆ. ಹಿಂದೂಗಳಿಗೆ ರಕ್ಷಣೆ ಸಿಗಬೇಕಾದರೆ ನಾವು ಚುನಾವಣೆಯಲ್ಲಿ ನಮ್ಮ‌ ಗೆಲುವು ಅನಿವಾರ್ಯ ಎಂದರು. 83 ಅಭ್ಯರ್ಥಿಗಳ ಪಟ್ಟಿಯನ್ನು ಜನವರಿಯಲ್ಲಿ ಬಿಡುಗಡೆ ಮಾಡಲಾಗುವುದು. ಕೆಲ ರೈತ ಸಂಘಗಳು ನಮ್ಮೊಂದಿಗೆ ಒಟ್ಟಾಗುತಗತಿವೆ. ಕೇಸರಿ ಒಕ್ಕೂಟ – ಸಮಾನ ಮನಸ್ಕ ಸಂಘಟನೆಗಳು ಸೇರ್ಪಡೆ ಆಗಿವೆ ಎಂದರು.

ಪ್ರಮೋದ್ ಮುತಾಲಿಕ್ ಅವರು ಕಾರ್ಕಳದಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುವ ಬಗ್ಗೆ ನಮ್ಮನ್ನು ಸಂಪರ್ಕಿಸಿಲ್ಲ. ನಮ್ಮ ಬೆಂಬಲ ಕೇಳಿದರೆ ಖಂಡಿತ ನೀಡುತ್ತೆವೆ. ಇಲ್ಲದೇ ಇದ್ದರೆ ನಮ್ಮದೆ ಅಭ್ಯರ್ಥಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ