ಬಿಜೆಪಿಗೆ ಯಾರ ಜೊತೆಗೂ ಮೈತ್ರಿಯ ಅಗತ್ಯವಿಲ್ಲ: ವಿ.ಶ್ರೀನಿವಾಸ್ ಪ್ರಸಾದ್

shreenivas prasad
07/12/2021

ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಯಾರ ಜೊತೆಗೂ ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಜಯಲಕ್ಷ್ಮಿಪುರಂನ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾವು ಸ್ಪರ್ಧಿಸಿರುವ ಆರು ಕಡೆಗಳಲ್ಲಿ ಬೆಂಬಲ ಕೊಡಿ ಎಂದು ಜೆಡಿಎಸ್‌ನವರು ಬಿಜೆಪಿಯನ್ನು ಕೇಳಿದ್ದಾರೆ.  ಜೆಡಿಎಸ್‌ ಸ್ಪರ್ಧಿಸದ ಕಡೆಗಳಲ್ಲಿ ಬೆಂಬಲ ನೀಡಿದರೆ ಬಿಜೆಪಿಗೆ ಅನುಕೂಲ ಆಗಲಿದೆ ಎಂದು ಬಿ.ಎಸ್‌.ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಬಗ್ಗೆ ಹೈಕಮಾಂಡ್‌ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.

ಇನ್ನೂ ತಮ್ಮ ರಾಜಕೀಯದ ಕಡು ವಿರೋಧಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡ ಹತ್ತಿರವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ಅವರನ್ನು ಹೀನಾಯವಾಗಿ ಸೋಲಿಸಿದ್ದರು. ಬಾದಾಮಿಯಲ್ಲಿ ಗೆಲ್ಲದಿದ್ದರೆ, ಅವರು ಸಿದ್ದರಾಮನಹುಂಡಿಗೆ ಹೋಗಬೇಕಿತ್ತು. ವಾಸ್ತವ ಹೀಗಿದ್ದರೂ, ತಮ್ಮನ್ನು ಸೋಲಿಸಿದ್ದ ಜಿ.ಟಿ.ದೇವೇಗೌಡ ಅವರೊಂದಿಗೆ ಕೈಜೋಡಿಸಿರುವುದು ನಗೆಪಾಟಲಿಗೀಡಾಗಿದೆ ಎಂದು ವ್ಯಂಗ್ಯವಾಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪ್ರಾಯೋಗಿಕ ಪರೀಕ್ಷೆಯ ನೆಪ: 17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ | ಮಾದಕ ದ್ರವ್ಯ ನೀಡಿ ಅತ್ಯಾಚಾರಕ್ಕೆ ಯತ್ನ

ಸತ್ಯದಪ್ಪೆ ಬೊಲ್ಲೆಯ ಬಯಕೆ/ ಸೀಮಂತ ಕಾರ್ಯಕ್ರಮ: ತುಳುನಾಡಿನ ಅವಳಿ ವೀರರು ಕಾನದ-ಕಟದರು | ಸಂಚಿಕೆ: 09

ಮದ್ಯಪ್ರಿಯರಿಗೆ ಶಾಕ್: ನಾಳೆಯಿಂದ 3 ದಿನಗಳ ಕಾಲ ಬಾರ್ ಬಂದ್!

ಬಿಜೆಪಿ ಕಾರ್ಯಕರ್ತನ ಕಿರುಕುಳದಿಂದ ಬೇಸತ್ತು ಬೆಂಕಿ ಹಚ್ಚಿಕೊಂಡು ತಾಯಿ ಮಗ ಆತ್ಮಹತ್ಯೆ

‘ಬಿಜೆಪಿಯ ಭೀಷ್ಮ ‘ ಉರಿಮಜಲು ಕೆ.ರಾಮ ಭಟ್ ಇನ್ನಿಲ್ಲ

ಇಸ್ಲಾಂ ತೊರೆದು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ

ಇತ್ತೀಚಿನ ಸುದ್ದಿ

Exit mobile version