ರಾಜಕೀಯ ಲಾಭಕ್ಕಾಗಿ ಬಿಜೆಪಿ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟಿದೆ | ಸಿದ್ದರಾಮಯ್ಯ ಗಂಭೀರ ಆರೋಪ - Mahanayaka

ರಾಜಕೀಯ ಲಾಭಕ್ಕಾಗಿ ಬಿಜೆಪಿ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟಿದೆ | ಸಿದ್ದರಾಮಯ್ಯ ಗಂಭೀರ ಆರೋಪ

siddaramaiha
08/12/2022


Provided by

ವಿವಾದಗಳನ್ನು ಬೆಳೆಯಲು ಬಿಟ್ಟು ರಾಜಕೀಯಕ್ಕೆ ಬಳಸುವುದು ಬಿಜೆಪಿಯ ಹುಟ್ಟುಗುಣ. ಸಂಧಾನದ ಮೂಲಕ ಪರಿಹರಿಸಬೇಕಿದ್ದ ಬೆಳಗಾವಿ ಗಡಿ ವಿವಾದವನ್ನು ಬೆಳೆಯಲು ಬಿಟ್ಟು ರಾಜ್ಯ ಸರ್ಕಾರ ಚಂದ ನೋಡುತ್ತಾ ಕೂತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ.

ಬೆಳಗಾವಿ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಂಡಿರುವ ಕಾರಣ ಜನ ಪರದಾಡುವಂತಾಗಿದೆ. ಎರಡೂ ಕಡೆಗಳಲ್ಲಿ ಜನ ಉದ್ರಿಕ್ತರಾಗಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಿ ಶಾಂತಿ ಕಾಪಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ವಿರುದ್ಧ ಅಲ್ಲಿನ ಸರ್ಕಾರ ಅತಿರೇಕದ ಕ್ರಮಗಳಿಗೆ ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆ ರಾಜ್ಯದ ಮುಖ್ಯಮಂತ್ರಿಗಳನ್ನು ಸಂಪರ್ಕಿಸಿ ಮಹಾರಾಷ್ಟ್ರದ ಕನ್ನಡಿಗರಿಗೆ ಸೂಕ್ತ ರಕ್ಷಣೆ ನೀಡಬೇಕು.

“ಡಬಲ್ ಎಂಜಿನ್ ಸರ್ಕಾರ” ಎಂದು ಎದೆ ಬಡಿದುಕೊಂಡರೆ ಸಾಲದು. ಆ ಅವಕಾಶವನ್ನು ಬಳಸಿಕೊಂಡು ಎರಡು ರಾಜ್ಯಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸಿಕೊಳ್ಳಲು ಕೇಂದ್ರ ಸರ್ಕಾರದ ನೆರವನ್ನು ಪಡೆಯಬೇಕು ಎಂದು ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ತರಾಟೆಗೆತ್ತಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ