ಇವಿಎಂ ಇರುವವರೆಗೆ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ: ಕುಮಾರಸ್ವಾಮಿ
ಚುನಾವಣೆಯಲ್ಲಿ ಅಕ್ರಮ ಮಾಡಲು ಬಿಜೆಪಿಯವರು ಮತದಾರರ ಪಟ್ಟಿ ಪರಿಷ್ಕರಣೆಯನ್ನು ಖಾಸಗಿ ಸಂಸ್ಥೆಗೆ ಗುತ್ತಿಗೆ ಕೊಟ್ಟಿದ್ದಾರೆ. ಇದು ಮಂತ್ರಿಗಳ ಬೇನಾಮಿ ಹೆಸರಿನಲ್ಲಿ ಇರುವ ಕಂಪನಿ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಇವಿಎಂ ಇರುವವರೆಗೆ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ. ಅಕ್ರಮದ ರೀತಿಯಲ್ಲೇ ಮತ್ತೆ ಅಧಿಕಾರಕ್ಕೆ ಬರಲು ಬಿಜೆಪಿ ಪ್ರಯತ್ನಿಸುತ್ತಿದೆ. ಇದರ ಬಗ್ಗೆ ನಾನು ಹೆಚ್ಚಾಗಿ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಎರಡೂ ರಾಷ್ಟ್ರೀಯ ಪಕ್ಷಗಳ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು. ಸಚಿವ ಅಶ್ವತ್ಥ್ ನಾರಾಯಣ ವಿರುದ್ಧ ನಾನು ಸಾಫ್ಟ್ ಆಗಿಲ್ಲ. ಬಿಜೆಪಿ ಎಷ್ಟೇ ಕುತಂತ್ರ ಮಾಡಿದರೂ ಅಧಿಕಾರಕ್ಕೆ ಬರಲು ಆಗುವುದಿಲ್ಲ. ಮುಂದೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಆಗ ಅಕ್ರಮ ಎಸಗಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka