ನಳಿನ್ ಕುಮಾರ್ ಕಟೀಲ್ ಗೆ ಹೊಸ ಜವಾಬ್ದಾರಿ ನೀಡಿದ ಬಿಜೆಪಿ ಹೈಕಮಾಂಡ್!

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಿಕೆಟ್ ಕೈತಪ್ಪಿದ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿಯನ್ನು ನೀಡಿದೆ.
ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ನಳಿನ್ ಕುಮಾರ್ ಕಟೀಲ್ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಈ ಬಾರಿ ಟಿಕೆಟ್ ಕೈತಪ್ಪಿದ ವೇಳೆ ಭಾವುಕರಾಗಿದ್ದ ನಳಿನ್, ಪಕ್ಷ ನನಗೆ ಮೂರು ಬಾರಿ ಅವಕಾಶ ನೀಡಿದೆ. ಪಕ್ಷ ನಿಂತ ನೀರಾಗಬಾರದು, ಹೊಸಬರು ಬರುತ್ತಿರಬೇಕು. ಹೈಕಮಾಂಡ್ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ, ಕಸ ಗುಡಿಸಿ ಎಂದರೂ ಗುಡಿಸುತ್ತೇನೆ ಎಂದಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth