ಬಿಜೆಪಿ ಹಿಂದುಳಿದ ವರ್ಗಗಳ ವಿರೋಧಿ ನೀತಿ ಅನುಸರಿಸುತ್ತಿದೆ: ಕುಮಾರಸ್ವಾಮಿ - Mahanayaka

ಬಿಜೆಪಿ ಹಿಂದುಳಿದ ವರ್ಗಗಳ ವಿರೋಧಿ ನೀತಿ ಅನುಸರಿಸುತ್ತಿದೆ: ಕುಮಾರಸ್ವಾಮಿ

kumaraswamy
11/04/2021

ಬಸವಕಲ್ಯಾಣ: ಬಿಜೆಪಿ ಸರ್ಕಾರ ಹಿಂದುಳಿದ ವರ್ಗಗಳ ವಿರೋಧಿ ನೀತಿ ಅನುಸರಿಸುತ್ತಿದೆ. ಆದ್ದರಿಂದ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿರುವ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.


Provided by

ನಗರದ ವರ್ಷಾ ಸಭಾಂಗಣದಲ್ಲಿ ಉಪ ಚುನಾವಣೆ ಅಂಗವಾಗಿ ಶನಿವಾರ ಜೆಡಿಎಸ್‌ ಆಯೋಜಿಸಿದ್ದ ಗೊಂಡ ಕುರುಬ ಸಮಾಜ ಸಂಘದ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಬಸವಣ್ಣನವರ ನೆಲದಲ್ಲಿ ಎಲ್ಲರೂ ಸಮಾನರು ಎಂಬ ಅವರ ತತ್ವದ ಪಾಲನೆಗಾಗಿಯೇ ಮುಸ್ಲಿಂ ಅಭ್ಯರ್ಥಿಯನ್ನು ಜೆಡಿಎಸ್‌ ನಿಂದ ಕಣಕ್ಕೆ ಇಳಿಸಿದ್ದೇವೆ. ಈ ಕ್ಷೇತ್ರ ಗೆಲ್ಲಲೇಬೇಕು ಎಂಬ ಹಟದಿಂದ ಮಸ್ಕಿ, ಬೆಳಗಾವಿಯಲ್ಲಿ ಕಣದಲ್ಲಿ ಉಳಿದಿಲ್ಲ. ನಾನು ಕೆಲ ದಿನ ಗಳಿಂದ ಇಲ್ಲಿಯೇ ಠಿಕಾಣಿ ಹೂಡಿದ್ದು ಎಲ್ಲ ಸಮುದಾಯಗಳ ಜನರು ಸಹಕಾರ ನೀಡಬೇಕು ಎಂದು ಕುಮಾರಸ್ವಾಮಿ ವಿನಂತಿಸಿದರು.

ಇತ್ತೀಚಿನ ಸುದ್ದಿ