ಉಳಾಯಿಬೆಟ್ಟು ಗ್ರಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ: ಕಾಂಗ್ರೆಸ್ ಬೆಂಬಲದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ

ulai bettu
16/08/2023

ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಎರಡನೇ ಅವಧಿಯ ಅಧ್ಯಕ್ಷ -ಉಪಾಧ್ಯಕ್ಷರ ಚುನಾವಣೆ ಇಂದು ನಡೆದಿದ್ದು ಕಾಂಗ್ರೆಸ್ ಬೆಂಬಲದೊಂದಿಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ.

ಉಳಾಯಿಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಒಟ್ಟು 11 ಸ್ಥಾನಗಳ ಪೈಕಿ 5 ಬಿಜೆಪಿ, 3 ಕಾಂಗ್ರೆಸ್, 3 ಎಸ್ ಡಿ ಪಿ ಐ ಸದಸ್ಯರುಗಳಿದ್ದಾರೆ. ಇಲ್ಲಿ ಅಧಿಕಾರದಲ್ಲಿ ಪಾಲುದಾರರು ಆಗಲು ಎಸ್. ಡಿ. ಪಿ.ಐ ಕಾಂಗ್ರೆಸ್ ನೊಂದಿಗೆ ಬೆಂಬಲ ಕೇಳಿತ್ತು. ಆದರೆ ಕಾಂಗ್ರೆಸ್ ಬೆಂಬಲ ನೀಡದ ಕಾರಣ  ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಕೇಶ್ ಶೆಟ್ಟಿ 6 ಮತಗಳೊಂದಿಗೆ ಜಯಗಳಿಸಿದ್ದರು.

ಈ ವೇಳೆ ಎಸ್.ಡಿ.ಪಿ.ಐ ಸದಸ್ಯರು ಉಪಾಧ್ಯಕ್ಷರ ಚುನಾವಣೆಯನ್ನು ಬಹಿಷ್ಕರಿಸಿ ಹೊರ ನಡೆದರು. ನಂತರ ನಡೆದ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ದಿನೇಶ್ 5 ಮತಗಳೊಂದಿಗೆ ಜಯಗಳಿಸಿದ್ದರು.

ಇತ್ತೀಚಿನ ಸುದ್ದಿ

Exit mobile version