ಬಿಜೆಪಿ ಸೋತಿದ್ದಕ್ಕೆ ಬೇಜಾರಿಲ್ಲ: ಸದಾನಂದ ಗೌಡ ಹೇಳಿದ್ದೇನು? - Mahanayaka
11:01 AM Tuesday 21 - October 2025

ಬಿಜೆಪಿ ಸೋತಿದ್ದಕ್ಕೆ ಬೇಜಾರಿಲ್ಲ: ಸದಾನಂದ ಗೌಡ ಹೇಳಿದ್ದೇನು?

22/06/2023

ಚಾಮರಾಜನಗರ: ನನಗೆ ಬಿಜೆಪಿ ಸೋತದ್ದಕ್ಕೆ ಬೇಜಾರಿಲ್ಲ, ಆದರೆ. ಕಾಂಗ್ರೆಸ್ ಬಂದಿದ್ದಕ್ಕೆ ಹೆಚ್ಚು ಬೇಸರ ಎಂದು ಮಾಜಿ ಸಿಎಂ ಡಿ.ವಿ‌.ಸದಾನಂದಗೌಡ ಹೇಳಿದರು.

ಚಾಮರಾಜನಗರದಲ್ಲಿ ಮಾಧ್ಯಮದವರೊಟ್ಟಿಗೆ ಮಾತನಾಡಿ, ಕರ್ನಾಟಕದ ದುರ್ದೈವದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಎಂತೆಂತಾ ಮಂತ್ರಿಗಳಿದ್ದಾರೆ, ಸರ್ವರ್ ನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ ಎನ್ನುತ್ತಾರೆ ಎಂದು ಕೈ ವಿರುದ್ಧ ಲೇವಡಿ ಮಾಡಿದರು.

ಕುಣಿಯಲಾರದವ ನೆಲ ಡೊಂಕು ಎಂದ ರೀತಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನವರು ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿಲ್ಲ ಎನ್ನುತ್ತಿದ್ದಾರೆ‌. ಘೋಷಣೆಗೂ ಮುನ್ನ ಕಾಂಗ್ರೆಸ್ ನವರಿಗೆ ಪರಿಜ್ಞಾನ ಇರಲಿಲ್ಲವಾ?? ಮುಂದೆ ಯಾವ ರೀತಿ ತೊಂದರೆ ಉಂಟಾಗಬಹುದು ಎಂಬ ಚಿಂತನೆ ಇರಲಿಲ್ಲವಾ?? 16 ಬಾರಿ ಬಜೆಟ್ ಮಂಡಿಸಿದ್ದಾರೆ ಸಿದ್ದರಾಮಯ್ಯಗೆ ಮುಂದಾಲೋಚನೆ ಇರಬೇಕಿತ್ತು, 16 ಬಾರಿ ಬಜೆಟ್ ಮಂಡಿಸಿದರೇ ಗದ್ದೆಯಲ್ಲಿ ಭತ್ತ ಬೆಳೆಯುವುದಿಲ್ಲ ಎಂದು ಕಿಡಿಕಾರಿದರು.

ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ, ರೀತಿ ಚೀಪ್ ಪಾಲಿಟಿಕ್ಸ್ ನ್ನು ಮುಖಂಡರು, ಕಾರ್ಯಕರ್ತರು ಮಾಡುವುದಿಲ್ಲ, ಕರ್ನಾಟಕದ ಪ್ರತಿಯೊಬ್ಬರಿಗೂ ಅಕ್ಕಿ ಸಿಗಬೇಕೆಂಬುದು ನಾಯಕರ, ಕಾರ್ಯಕರ್ತರ ಆಶಯವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದರು.

ಸಿಎಂಡಿಸಿಎಂಗೆ ಸವಾಲ್ ಹಾಕುವ ನಾಯಕ ನೇಮಕ:

ವಿಪಕ್ಷ ನಾಯಕನನ್ನು ನೇಮಕ ಮಾಡುವುದು ನಮ್ಮ ಧರ್ಮ. ಅಧಿವೇಶನ ಆರಂಭಗೊಳ್ಳುವ ಮುನ್ನ ವಿಪಕ್ಷ ನಾಯಕನನ್ನು ನೇಮಕ ಮಾಡಲಾಗುವುದು. ಸಿಎಂಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜುಗಲ್ಬಂದಿಗೆ ಸವಾಲೊಡ್ಡುವ ನಾಯಕನನ್ನು ನೇಮಕ ಮಾಡಲಾಗುವುದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದರು.

ಇದೇ ವೇಳೆ ಕೆಲವರು ಹೊಂದಾಣಿಕೆ ರಾಜಕಾರಣ ಮಾಡುತ್ತಾರೆ ಎಂಬ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ, ನಮ್ಮ ಪಕ್ಷದಲ್ಲಿ ಹೊಂದಾಣಿಕೆ ರಾಜಕರಣ ಯಾರೂ ಮಾಡುವುದಿಲ್ಲ, ರೀತಿ ರಾಜಕಾರಣ ಮಾಡಿದ್ದರೇ ಹಲವು ಕ್ಷೇತ್ರಗಳಲ್ಲಿ ಗೆಲ್ಲಬಹುದಿತ್ತು, ಆದರೆ ನಾವು ಸೋತರೂ ಪರವಾಗಿಲ್ಲ, ಹೊಂದಾಣಿಕೆ ರಾಜಕಾರಣ ಮಾಡಲ್ಲ ಎಂಬುದು ಮುಖಂಡರ, ಪಕ್ಷದ ನಿಲುವಾಗಿದೆ ಎಂದರು.

ಇನ್ನು, ಸೋಲಿನ ಪರಾಮರ್ಶೆಯ ಕಾರ್ಯಕರ್ತರ ಸಭೆಗೆ ಮಾಜಿ ಸಚಿವ ಸೋಮಣ್ಣ ಗೈರಾಗಿದ್ದರ ಸಂಬಂಧ ಪ್ರತಿಕ್ರಿಯಿಸಿ, ಸೋಮಣ್ಣ ತಾನು ಬರುವುದಿಲ್ಲ ಎಂದು ಹೇಳಿದರು, ಸೋಲಿನ ನೋವಿನಿಂದ ಅವರಿನ್ನೂ ಹೊರಬಂದಿಲ್ಲ, ಆದರೆ ಅವರಿಗೆ ಯಾರಾ ಮೇಲೂ ಕೋಪ ಇಲ್ಲಾ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿhttps://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ