"ಮುಧೋಳ" ರವಿಚಂದ್ರನ್ ಪುತ್ರನ ಹೊಸ ಸಿನಿಮಾ - Mahanayaka

“ಮುಧೋಳ” ರವಿಚಂದ್ರನ್ ಪುತ್ರನ ಹೊಸ ಸಿನಿಮಾ

mudolla
27/04/2023


Provided by

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಇದೀಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದು, ಈ ಸಿನಿಮಾಗೆ ಮುಧೋಳ ಎಂದು ಸ್ವತಃ ರವಿಚಂದ್ರನ್ ಹೆಸರಿಟ್ಟಿದ್ದಾರೆ.

ಈ ಟೈಟಲ್ ಇಟ್ಟಿರುವ ಬಗ್ಗೆ ಚಿತ್ರತಂಡ ಹೇಳಿಕೊಂಡಿದ್ದು, ಮುಧೋಳ ಎನ್ನುವುದು ಉತ್ತರ ಕರ್ನಾಟಕದ್ದು, ಈ ಮುಧೋಳ ಸ್ಥಳ “ಮುಧೋಳ” ನಾಯಿಗೆ ಫೇಮಸ್.ಚಿತ್ರದಲ್ಲಿ ಹೀರೋ ಹೆಸರು ಕೂಡ ಮುಧೋಳ ಆಗಿದ್ದರಿಂದ ಎಲ್ಲ ಈ ಟೈಟಲ್ ಆಯ್ಕೆಯಾಗಿದೆ.

ಮುಧೋಳ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ವಿಕ್ರಮ್ ರವಿಚಂದ್ರನ್, ತ್ರಿವಿಕ್ರಮ ರಿಲೀಸ್ ಆಗಿದ್ದು ಜೂನ್ 24, ಅದು ಆದ್ಮೇಲೆ ಏಪ್ರಿಲ್ 26 ಅಂದ್ರೆ ಇವತ್ತು ನನ್ನ ಎರಡನೇ ಸಿನಿಮಾದ ಟೈಟಲ್ ಲಾಂಚ್ ಮಾಡುತ್ತಿದ್ದೇವೆ. ತುಂಬಾ ಜನ ವಿಕೆಆರ್ ಅಂದ್ರೇನು ಅಂತಾ ಕೇಳುತ್ತಿದ್ರು. ವಿಕೆಆರ್ ವಿಕ್ರಮ್ ರವಿಚಂದ್ರನ್ ಅನ್ನೋದು ತುಂಬಾ ಜನಕ್ಕೆ ಗೊತ್ತಿದೆ. ವಿಕೆಆರ್ ಕೆ ಬ್ರ್ಯಾಂಡ್ ಶುರು ಮಾಡೋಣಾ ಅಂತಾ. ವಿಕೆಆರ್ ವಿಕ್ರಮ್ ರವಿಚಂದ್ರನ್ ಬರುತ್ತದೆ.

ವೀರಸ್ವಾಮಿ ರವಿಚಂದ್ರನ್ ಬರುತ್ತೇ. ನೆಕ್ಸ್ಟ್ ನಿಮ್ಮ ಫೇವರೇಟ್ ಡಾ. ವಿ ರವಿಚಂದ್ರನ್ ಹೆಸರು ಬರುತ್ತದೆ. ಇದರ ಮಧ್ಯೆ ಕನ್ನಡ ಬರುತ್ತದೆ. ಪ್ರಯತ್ನ ಅನ್ನೋದು ನಿರಂತರ. ಪ್ರಯತ್ನ ಮಾಡಿ ಜೀವನದಲ್ಲಿ ಗೆಲುವುದು ಮುಖ್ಯವಲ್ಲ. ಜೀವನವನ್ನೇ ಗೆಲ್ಲಬಹುದು. ಆ ರೀತಿ ಒಂದು ತಂಡ ನಿಮ್ಮ ಮುಂದೆ. ನನ್ನ ಎರಡನೇ ಹೆಜ್ಜೆ..ನಿಮ್ಮ ಪ್ರೀತಿ ಹಾರೈಕೆ ಹೀಗೆ ಇರಲಿ ಎಂದಿದ್ದಾರೆ.

ತಮಿಳು, ತೆಲುಗು ಚಿತ್ರರಂಗದಲ್ಲಿ ಸಹ ನಿರ್ದೇಶಕನಾಗಿ, ಸಿನಿಮಾ ಬರಹಗಾರನಾಗಿ ಗುರುತಿಸಿಕೊಂಡಿರುವ ಕಾರ್ತಿಕ್ ರಾಜನ್ ಮುಧೋಳ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಹೆಜ್ಜೆ. ಎಸ್.ತಮನ್ ಜೊತೆ ಕೆಲಸ ಮಾಡಿ ಅನುಭವ ಇರುವ ಯುವರಾಜ್ ಚಂದ್ರನ್ ಚಿತ್ರಕ್ಕೆ ಸಂಗೀತ ನಿರ್ದೇಶನ ನೀಡುತ್ತಿದ್ದು, ಟಗರು, ಸಲಗ ಸಿನಿಮಾ ಖ್ಯಾತಿ ಮಾಸ್ತಿ ಸಂಭಾಷಣೆ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಡಾ.ಕೆ.ರವಿವರ್ಮಾ ಆಕ್ಷನ್ ಚಿತ್ರಕ್ಕಿದೆ. ತಂಡವ್ ಸ್ಟುಡಿಯೋಸ್ ಬ್ಯಾನರ್ ನಡಿ ರಕ್ಷಾ ವಿಜಯಕುಮಾರ್ ಹಾಗೂ ಸಿಲ್ಜು ಕಣ್ಣನ್ ನಿರ್ಮಾಣ ಮಾಡ್ತಿರುವ ಮಧೋಳ್ ಚಿತ್ರದಲ್ಲಿ ಲವ್ ಮಾಕ್ಟೇಲ್ ಖ್ಯಾತಿ ಅಭಿಲಾಶ್, ರಘು ಮ್ಯೂಟಂಟ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಈಗಾಗ್ಲೇ 30 ದಿನ ಚಿತ್ರೀಕರಣ ಕಂಪ್ಲೀಟ್ ಮಾಡಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ