5:12 AM Saturday 18 - October 2025

ಮಹಾರಾಷ್ಟ್ರದ ಗ್ರಾಮಗಳನ್ನು ಬಿಜೆಪಿ ಮಾರಾಟ ಮಾಡಲು ಯತ್ನಿಸುತ್ತಿದೆ: ಉದ್ಧವ್‌ ಠಾಕ್ರೆ ಗಂಭೀರ ಆರೋಪ

uddhav thackeray
09/12/2022

ಮುಂಬೈ: ಕರ್ನಾಟಕ ವಿಧಾನಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡಲು ಮುಂದಾಗಿದೆ ಎಂದು ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಗಂಭೀರ ಆರೋಪ ಮಾಡಿದ್ದಾರೆ.

ತಮ್ಮ ಪಕ್ಷದ ಮುಖವಾಣಿ ‘ಸಾಮ್ನಾ’ ಪತ್ರಿಕೆಯ ಸಂಪಾದಕೀಯದಲ್ಲಿ ಬರೆದಿರುವ ಅವರು, ‘ಮಹಾರಾಷ್ಟ್ರದ ಅಭಿವೃದ್ಧಿ ಯೋಜನೆಗಳನ್ನೆಲ್ಲಾ ಕಸಿದು ಗುಜರಾತ್‌ಗೆ ಕೊಟ್ಟಿದ್ದಾರೆ ಎಂದು ಆರೋಪಿಸಿದ್ದಾರಲ್ಲದೇ ಕೋವಿಡ್ ಸಾಂಕ್ರಾಮಿಕ ರೋಗದ ವೇಳೆಯಲ್ಲಿ ಗುಜರಾತ್‌ನ ಸ್ಥಿತಿಗತಿ ಹಾಗೂ ಮೊರ್ಬಿ ಸೇತುವೆ ದುರಂತದ ಹೊರತಾಗಿಯೂ ಈ ಫಲಿತಾಂಶ ಬಂದಿರುವುದು ಅಚ್ಚರಿಯೇನಲ್ಲ ಎಂದಿದ್ದಾರೆ.

ಮಹಾರಾಷ್ಟ್ರ ಅಭಿವೃದ್ಧಿ ಯೋಜನೆಗಳು ಗುಜರಾತ್‌ ಗೆ ಹೋಗಿದ್ದು ಕೂಡ ಬಿಜೆಪಿ ಗೆಲುವಿನಲ್ಲಿ ಪಾತ್ರ ವಹಿಸಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಈ ಯೋಜನೆಗಳನ್ನು ಗುಜರಾತ್‌ ಗೆ ಮಾರಾಟ ಮಾಡಿದರು. ಈಗ ಕರ್ನಾಟಕ ಚುನಾವಣೆ ಗೆಲ್ಲಲು ಮಹಾರಾಷ್ಟ್ರದ ಗ್ರಾಮಗಳನ್ನು ಮಾರಾಟ ಮಾಡಲಾಗುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version