ಬಿಜೆಪಿ ಕಾರ್ಯಕರ್ತರನ್ನು ಅವರ ಪಕ್ಷದವರೇ ಕೊಲೆ ಮಾಡುತ್ತಿದ್ದಾರೆ | ವಿನಯ್ ಕುಮಾರ್ ಸೊರಕೆ - Mahanayaka
10:01 AM Wednesday 20 - August 2025

ಬಿಜೆಪಿ ಕಾರ್ಯಕರ್ತರನ್ನು ಅವರ ಪಕ್ಷದವರೇ ಕೊಲೆ ಮಾಡುತ್ತಿದ್ದಾರೆ | ವಿನಯ್ ಕುಮಾರ್ ಸೊರಕೆ

vinay kumar sorake
12/06/2021


Provided by

ಉಡುಪಿ: ಬಿಜೆಪಿ ಕಾರ್ಯಕರ್ತರನ್ನು ಅವರ ಪಕ್ಷದವರೇ ಕೊಲೆ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.

ಕುಂದಾಪುರದ ಎಡಮೊಗೆಯಲ್ಲಿ ನಡೆದ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು,  ಉಡುಪಿ ಜಿಲ್ಲೆಯಲ್ಲಿ ವಿಚಿತ್ರಕಾರಿ ಘಟನೆಗಳು ಹೆಚ್ಚಾಗುತ್ತಿವೆ. ಕುಂದಾಪುರ ಎಡಮೊಗೆಯಲ್ಲಿ ನಡೆದ ಹತ್ಯೆ ಪ್ರಕರಣವೇ ಇದಕ್ಕೆ ಸಾಕ್ಷಿಯಾಗಿದೆ. ಪಂಚಾಯತ್ ನಿಂದ ಆಗುತ್ತಿರುವ ತೊಂದರೆಯನ್ನು ಪ್ರಶ್ನಿಸಿದಕ್ಕೆ  ಅವರ ಪಕ್ಷದವರೇ ಕೊಲೆ ಮಾಡಿದ್ದಾರೆ ಎಂದು ಅವರು ಹೇಳಿದರು.

ಗ್ರಾಮಪಂಚಾಯತ್ ಅಧ್ಯಕ್ಷರೇ ತಮ್ಮ ಪಕ್ಷದವರನ್ನು ಕೊಲೆ ಮಾಡಿದ್ದಾರೆ. ಈ ಪ್ರಕರಣದಲ್ಲಿ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದೆ. ಇನ್ನಷ್ಟು ಮಂದಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಅನುಮಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಆಡಳಿತದಲ್ಲಿ ಬಿಜೆಪಿ ಕಾರ್ಯಕರ್ತರ ಕೊಲೆಯಾಗುತ್ತಿದೆ ಎಂದು ಕಳೆದ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಮೇಲೆ ಸಾಕಷ್ಟು ಆರೋಪ ಮಾಡಿದ್ದರು.   ಪ್ರವೀಣ್ ಪೂಜಾರಿ ಹತ್ಯೆ ಪ್ರಕರಣ, ಕೋಟ ಅವಳಿ ಒಲೆ ಪ್ರಕರಣದಲ್ಲಿ ಕೊಲೆ ಮಾಡಿದ ಎಲ್ಲ ಆರೋಪಿಗಳು ಬಿಜೆಪಿಗೆ ಸೇರಿದವರಾಗಿದ್ದಾರೆ ಎಂದು ಅವರು ಆರೋಪಿಸಿದರು.

ಎಡಮೊಗೆ ಪ್ರಕರಣದಲ್ಲಿ ಬಿಜೆಪಿ ಪಂಚಾಯತ್ ಅಧ್ಯಕ್ಷನೇ ಮೊದಲ ಆರೋಪಿಯಾಗಿದ್ದು, ಸಣ್ಣಪುಟ್ಟ ಘಟನೆಯಾದರೂ ಶೋಭಾ ಕರಂದ್ಲಾಜೆ ದೊಡ್ಡದಾಗಿ ಬಿಂಬಿಸುತ್ತಾರೆ. ರಾಜಕೀಯ ಲಾಭ ಪಡೆಯಲು ಹವಣಿಸುತ್ತಾರೆ. ಆದರೆ, ಈ ಪ್ರಕರಣದಲ್ಲಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಬಿ.ವೈ. ರಾಘವೇಂದ್ರ ಸಂತ್ರಸ್ತರ ಮನೆಗೆ ಯಾಕೆ ಭೇಟಿ ಕೊಟ್ಟಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ:

 ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿದ್ದಕ್ಕೆ ಕೊಲೆ  ಮಾಡಿದ ಗ್ರಾ.ಪಂ.ಅಧ್ಯಕ್ಷ!

ಇತ್ತೀಚಿನ ಸುದ್ದಿ