ವಿಧವೆ ಮಹಿಳೆಯೊಂದಿಗೆ ಹೋಂ ಸ್ಟೇನಲ್ಲಿ ತಂಗಿದ ಆರೋಪ: ಸಿ.ಟಿ.ರವಿ ಆಪ್ತನಿಗೆ ಧರ್ಮದೇಟು!
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸಂಚಲನ ಮೂಡಿಸುವ ಘಟನೆಯೊಂದು ನಡೆದಿದ್ದು, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (CDA) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಆನಂದ್ ಅವರ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ.
ಘಟನೆಯ ವಿವರ: ಮಾಜಿ ಸಚಿವ ಸಿ.ಟಿ. ರವಿ ಅವರ ಆಪ್ತರೆಂದೇ ಗುರುತಿಸಿಕೊಂಡಿರುವ ಆನಂದ್, ಚಿಕ್ಕಮಗಳೂರು–ಕಡೂರು ಮಾರ್ಗದಲ್ಲಿರುವ ಖಾಸಗಿ ಹೋಂ ಸ್ಟೇ ಒಂದರಲ್ಲಿ ಮತ್ತಾವರ ಗ್ರಾಮದ ವಿಧವೆ ಮಹಿಳೆಯೊಂದಿಗೆ ತಂಗಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಮಹಿಳೆಯ ವಾಸವಿದ್ದ ಮತ್ತಾವರ ಗ್ರಾಮದ ಹತ್ತಾರು ಯುವಕರು ಹಾಗೂ ಗ್ರಾಮಸ್ಥರು ಒಟ್ಟಾಗಿ ಹೋಂ ಸ್ಟೇ ಮೇಲೆ ದಾಳಿ ನಡೆಸಿದ್ದಾರೆ.
ಹೋಂ ಸ್ಟೇ ಮೇಲೆ ದಾಳಿ:
ಗ್ರಾಮಸ್ಥರು ಹೋಂ ಸ್ಟೇಗೆ ನುಗ್ಗಿ ಪ್ರತಿಯೊಂದು ಕೊಠಡಿಗಳನ್ನು ಪರಿಶೀಲಿಸಿದಾಗ, ಆನಂದ್ ಅವರು ಮಹಿಳೆಯೊಂದಿಗೆ ಇರುವುದು ಪತ್ತೆಯಾಗಿದೆ ಎನ್ನಲಾಗಿದೆ. ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ಬಿಜೆಪಿ ಮುಖಂಡ ಆನಂದ್ ಅವರನ್ನು ತರಾಟೆಗೆ ತೆಗೆದುಕೊಂಡು, ಸ್ಥಳದಲ್ಲೇ ಹಲ್ಲೆ ನಡೆಸಿದ್ದಾರೆ.
ಪೊಲೀಸ್ ಭೇಟಿ:
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಪ್ರಕರಣ ಜಿಲ್ಲಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದ್ದು, ರಾಜಕೀಯ ವಲಯದಲ್ಲೂ ಸಂಚಲನ ಸೃಷ್ಟಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD



























