ಹಾಸನ ಪೆನ್ ಡ್ರೈವ್ ಕೇಸ್ ನಲ್ಲಿ ಸದ್ದು ಮಾಡಿದ್ದ ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ವಶಕ್ಕೆ! - Mahanayaka
11:23 AM Saturday 23 - August 2025

ಹಾಸನ ಪೆನ್ ಡ್ರೈವ್ ಕೇಸ್ ನಲ್ಲಿ ಸದ್ದು ಮಾಡಿದ್ದ ಬಿಜೆಪಿ ಮುಖಂಡ ದೇವರಾಜೇಗೌಡ ಪೊಲೀಸ್ ವಶಕ್ಕೆ!

bjp leader devarajegowda
10/05/2024


Provided by

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ರಿಲೀಸ್ ಕೇಸ್ ನಲ್ಲಿ ಭಾರೀ ಸದ್ದು ಮಾಡಿದ್ದ ಬಿಜೆಪಿ ಮುಖಂಡ ದೇವರಾಜೇಗೌಡ ಅವರನ್ನು ಈ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ನಲ್ಲಿ ದೇವರಾಜೇಗೌಡ ಅವರ ಕೈವಾಡದ ಬಗ್ಗೆ ಪ್ರಜ್ವಲ್ ರೇವಣ್ಣ ಅವರ ಮಾಜಿ ಕಾರು ಡ್ರೈವರ್  ಕಾರ್ತಿಕ್ ನೇರ ಆರೋಪ ಮಾಡಿದ್ದರು.  ಆ ಬಳಿಕ ಈ ಪ್ರಕರಣಕ್ಕೂ ಡಿ.ಕೆ.ಶಿವಕುಮಾರ್ ಅವರಿಗೂ ಸಂಬಂಧ ಕಲ್ಪಿಸಿ ದೇವರಾಜೇಗೌಡ ಸಾಕಷ್ಟು ಆರೋಪಗಳನ್ನು ಮಾಡಿದ್ದರು.

ಹೊಳೆನರಸೀಪುರದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಮೇಲೆ ಕೇಸ್​ ಒಂದು ದಾಖಲಾಗಿತ್ತು. ಅದೇ ಮಹಿಳೆ ವಿರುದ್ಧ ಹೆಬ್ಬಾಳದಲ್ಲಿ ದೇವರಾಜೇಗೌಡ ಕೂಡ ದೂರು ದಾಖಲಿಸಿದ್ದರು. ಈ ಕೇಸಲ್ಲಿ ದೇವರಾಜೇಗೌಡರನ್ನು ಎಸ್​ ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ