ಜಿಎಸ್ ಟಿ ಕುರಿತ ಪ್ರಶ್ನೆ: ಕೇಂದ್ರ ಸಚಿವೆಯ ವಿರುದ್ಧ ನೆಟ್ಟಿಗರು ಫುಲ್ ಗರಂ - Mahanayaka

ಜಿಎಸ್ ಟಿ ಕುರಿತ ಪ್ರಶ್ನೆ: ಕೇಂದ್ರ ಸಚಿವೆಯ ವಿರುದ್ಧ ನೆಟ್ಟಿಗರು ಫುಲ್ ಗರಂ

13/09/2024

ಸಿಹಿತಿಂಡಿಗಳ ಮೇಲೆ 5% ಮತ್ತು ಕೆನೆ ತುಂಬಿದ ಪೇಸ್ಟ್ರಿಗಳ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತಿದೆ ಎಂದು ಜಿಎಸ್‌ಟಿ ಬಗೆಗಿನ ಸಂಕೀರ್ಣತೆಗಳ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇವರನ್ನು ಅನ್ನಪೂರ್ಣ ಗ್ರೂಪ್ ಅಧ್ಯಕ್ಷ ಶ್ರೀನಿವಾಸನ್ ಪ್ರಶ್ನಿಸಿದ್ದರು. ಅವರು ಪ್ರಶ್ನಿಸಿ, ಕ್ಷಮೆ ಕೇಳಿದ ಘಟನೆಯ ವಿಡಿಯೋ ವೈರಲ್ ಆಗಿದ್ದು, ನಿರ್ಮಲಾ ಸೀತಾರಾಮನ್ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ಪ್ರಮುಖ ಉದ್ಯಮಿಗಳೊಂದಿಗೆ ಸಮಾಲೋಚನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಭಾವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಶ್ರೀನಿವಾಸನ್, ವಿವಿಧ ಜಿಎಸ್‌ಟಿ ದರಗಳಿಂದ ರೆಸ್ಟೋರೆಂಟ್‌ಗಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಗಮನ ಸೆಳೆದರು. “ಸಿಹಿತಿಂಡಿಗಳ ಮೇಲೆ 5% ಮತ್ತು ಕೆನೆ ತುಂಬಿದ ಪೇಸ್ಟ್ರಿಗಳ ಮೇಲೆ 18% ಜಿಎಸ್‌ಟಿ ವಿಧಿಸಲಾಗುತ್ತಿದೆ. ನಮ್ಮ ಬೇರಿಕೆಯಲ್ಲಿ ಖಾಲಿ ಬನ್ ಮಾರಿದರೆ 5% ಜಿಎಸ್‌ಟಿ. ಅದೇ ಬನ್‌ಗೆ ಕ್ರೀಮ್ ಹಾಕಿ ಕ್ರೀಮ್ ಬನ್ ಮಾರಿದರೆ 18% ಜಿಎಸ್‌ಟಿ. ಯಾಕೆ ಹೀಗೆ” ಎಂದು ಹಾಸ್ಯಾತ್ಮಕವಾಗಿ ವಿವರಿಸಿದರು.

ಆದರೆ, ಅವರ ಮಾತುಗಳಿಂದ ಸಿಡಿಮಿಡಿಗೊಂಡ ನಿರ್ಮಲಾ ಸೀತಾರಾಮನ್, ಸಭೆಯ ಮರುದಿನ ಶ್ರೀನಿವಾಸನ್ ಸಭೆಯಲ್ಲಿ ಎತ್ತಿದ ಪ್ರಶ್ನೆಯ ಕಾರಣಕ್ಕಾಗಿ ಮಾಧ್ಯಮಗಳ ಎದುರು ಕ್ಷಮೆ ಕೇಳುವಂತೆ ಮಾಡಿದ್ದಾರೆ.
ವಿಡಿಯೋವನ್ನು ಹಂಚಿಕೊಂಡಿರುವ ನೆಟ್ಟಿಗರು, “ನಿರ್ಮಲಾ ಸೀತಾರಾಮನ್ ಕೊಯಮತ್ತೂರಿನ ಹೆಮ್ಮೆಯ ಅನ್ನಪೂರ್ಣ ಗ್ರೂಪ್ ಮುಖ್ಯಸ್ಥ ಶ್ರೀನಿವಾಸನ್ ರನ್ನು ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.

ಶ್ರೀನಿವಾಸ್ ಮಾಡಿದ ಅಪರಾಧವೇನು? ಇದು ಬಿಜೆಪಿ ನಾಯಕರ ದುರಹಂಕಾರವನ್ನು ಬಯಲು ಮಾಡುತ್ತದೆ. ಮಾತ್ರವಲ್ಲದೆ, ತಮಿಳುನಾಡಿನ ಜನತೆಗೆ ಮಾಡಿದ ಅವಮಾನವೂ ಆಗಿದೆ. ಹೀಗಾಗಿಯೇ ಬಿಜೆಪಿ ಎಂದಿಗೂ ತಮಿಳುನಾಡನ್ನು ಗೆಲ್ಲುವುದಿಲ್ಲ” ಎಂದು ಕಿಡಿಕಾರಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ