ಬಿಜೆಪಿ ಮುಖಂಡನ ಕಾರಿನ ಮೇಲೆ ಕಿಡಿಗೇಡಿಗಳಿಂದ ದಾಳಿ - Mahanayaka

ಬಿಜೆಪಿ ಮುಖಂಡನ ಕಾರಿನ ಮೇಲೆ ಕಿಡಿಗೇಡಿಗಳಿಂದ ದಾಳಿ

kaduru
02/06/2025


Provided by

ಚಿಕ್ಕಮಗಳೂರು: ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನ ಕಾರಿನ ಮೇಲೆ ದಾಳಿ ನಡೆಸಿರುವ ಘಟನೆ ಕಳೆದ ರಾತ್ರಿ ಕಡೂರು ಪಟ್ಟಣದಲ್ಲಿ ನಡೆದಿದೆ.

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಬಾನೆಟ್, ಗ್ಲಾಸ್, ಬಂಪರ್ ನ್ನು ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಅಲ್ಲದೇ ಮನೆ ಮುಂದೆ ಇದ್ದ ಪಾಟುಗಳನ್ನು ಕೂಡ ಒಡೆದು ಹಾಕಿದ್ದಾರೆ.

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭರತ್ ಕೆಂಪರಾಜ್ ಅವರ ಕಾರಿನ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ.  ಕಳೆದ ರಾತ್ರಿ ಕಡೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಘಟನೆ ಸಂಬಂಧ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ  ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ