ಮತ್ತೆ ಭಿನ್ನಮತ: ಸೋಮಣ್ಣಗೆ ಟಿಕೆಟ್, ಉಸ್ತುವಾರಿ ಬೇಡವೆಂದು ಬಿಜೆಪಿ ಮುಖಂಡರ ಆಗ್ರಹ!!! - Mahanayaka
10:33 PM Thursday 11 - September 2025

ಮತ್ತೆ ಭಿನ್ನಮತ: ಸೋಮಣ್ಣಗೆ ಟಿಕೆಟ್, ಉಸ್ತುವಾರಿ ಬೇಡವೆಂದು ಬಿಜೆಪಿ ಮುಖಂಡರ ಆಗ್ರಹ!!!

chamarajanagara
21/03/2023

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಚುನಾವಣಾ ಉಸ್ತುವಾರಿಯನ್ನು ಸಚಿವ ಸೋಮಣ್ಣಗೆ ಕೊಟ್ಟಿರುವುದಕ್ಕೇ ಜಿಲ್ಲಾ ಬಿಜೆಪಿ ಮುಖಂಡರೇ ವಿರೋಧ ವ್ಯಕ್ತಪಡಿಸಿದ್ದಾರೆ.


Provided by

ಇಂದು ಚಾಮರಾಜನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ವಕ್ತಾರ ಅಯ್ಯನಪುರ ಶಿವಕುಮಾರ್ ಹಾಗೂ ಇನ್ನಿತರ ಬಿಜೆಪಿ ಮುಖಂಡರು “ಗೋ ಬ್ಯಾಕ್ ಸೋಮಣ್ಣ” ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ಸಚಿವ ಸೋಮಣ್ಣಗೆ ಚಾಮರಾಜನಗರ ಜಿಲ್ಲೆಯಿಂದ ಟಿಕೆಟ್ ಏನಾದರೂ ಕೊಟ್ಟರೇ ಗೋ ಬ್ಯಾಕ್ ಸೋಮಣ್ಣ ಚಳವಳಿ ನಡೆಸಲಾಗುವುದು ಜೊತೆಗೆ ಚುನಾವಣಾ ಉಸ್ತುವಾರಿಯನ್ನೂ ನೀಡಬಾರದು ಎಂದು ಒತ್ತಾಯಿಸಿರುವುದು ಬಿಜೆಪಿ ಪಾಳೇಯದಲ್ಲಿ ಮತ್ತೇ ಭಿನ್ನಮತ ಸ್ಪೋಟವಾಗಿದೆ.

ಸಚಿವ ಸೋಮಣ್ಣ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಆದ ಬಳಿಕ ಪಕ್ಷದ ಸಂಘಟನೆಯಲ್ಲಿ ತೊಡಗಿಲ್ಲ, ಕಳೆದ ಲೋಕ ಚುನಾವಣೆಯಲ್ಲೂ ಕೆಲಸ ಮಾಡಿಲ್ಲ, 2018 ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಸೋಲಿಗೆ ಕಾರಣರಾಗಿದ್ದರು, ಅವರಿಂದ ಪಕ್ಷಕ್ಕೆ ಯಾವುದೇ ಅನೂಕೂಕವಾಗಿಲ್ಲ ಇದನ್ನೆಲ್ಲ ಗಮನಿಸಿ ಚುನಾವಣಾ ಉಸ್ತುವಾರಿ ಕೊಡಬಾರದು ಎಂದು ಅವರು ಆಗ್ರಹಿಸಿದರು.

ಹನೂರು, ಚಾಮರಾಜನಗರ ಸೇರಿದಂತೆ ಕಾಂಗ್ರೆಸ್ ಶಾಸಕರನ್ನು ಹಾಡಿ ಹೊಗಳುತ್ತಾರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮಕ್ಕೈ ಗೈರಾಗಿ ಪಕ್ಷದ ಸಂಘಟನೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ, ಕಾಂಗ್ರೆಸ್ ಸೇರುತ್ತೇನೆಂದು ವರಿಷ್ಠರಿಗೆ ಬೆದರಿಕೆ ಒಡ್ಡುವ ತಂತ್ರವನ್ನು ಪ್ರಯೋಗಿಸಿದ್ದಾರೆ ಎಂದು ಬಿಜೆಪಿ ವಕ್ತಾರ ಅಯ್ಯನಪುರ ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ.

ಇದೇ ವೇಳೆ, ಚಾಮರಾಜನಗರ ಚುನಾವಣಾ ಉಸ್ತುವಾರಿಯಾಗಿ ವಿಜಯೇಂದ್ರ ಅವರನ್ನು ನೇಮಿಸಬೇಕು, ಯಡಿಯೂರಪ್ಪ ಅವರು ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಪ್ರಚಾರ ನಡೆಸಬೇಕು, ಚಾಮರಾಜನಗರ ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಇದೆ ಎಂದು ಬಿಎಸ್ ವೈ ಹಾಗೂ ವಿಜಯೇಂದ್ರ ಪರ ಬ್ಯಾಟ್ ಬೀಸಿದ್ದಾರೆ.

ಒಟ್ಟಿನಲ್ಲಿ ಇನ್ನೂ ಕೂಡ ಬಿಜೆಪಿಯಲ್ಲಿ ಬಿಎಸ್ ವೈ v|s ವಿ.ಸೋಮಣ್ಣ ಪರಿಸ್ಥಿತಿ ಇದೆ ಎಂಬುದಕ್ಕೇ ಇಂದಿನ ಸುದ್ದಿಗೋಷ್ಠಿ ಸಾಕ್ಷೀಕರಿಸಿದೆ. ಜೊತೆಗೆ, ಭಾರತೀತ ಜನತಾ ಪಕ್ಷದ ಲೆಟರ್ ಹೆಡ್ ನಲ್ಲೇ ಸುದ್ದಿಗೋಷ್ಠಿಗೆ ಆಹ್ವಾನಿಸಿದ್ದು ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂದು ತೋರಿಸಿದೆ‌.

ಇತ್ತೀಚಿನ ಸುದ್ದಿ