ಲಾಡ್ಜ್ ನಲ್ಲಿ ಬಾಲಕಿಯೊಂದಿಗೆ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರ ಅರೆಸ್ಟ್: ಮತ್ತೊಂದು ಬಾಲಕಿಯಿಂದಲೂ ದೂರು
ಉಡುಪಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದೊಯ್ದಿದ್ದ ಬಿಜೆಪಿ ಮುಖಂಡನ ಪುತ್ರನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಕಟಪಾಡಿಯ ಮಣಿಪುರದ ನಿವಾಸಿ ಶ್ರೀಶಾಂತ್ ಪೂಜಾರಿ(20) ಎಂಬಾತ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ ಈತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿದ್ದಾನೆ. ಈ ವಿಚಾರ ತಿಳಿದ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿ ತಂಗಿದ್ದ ಲಾಡ್ಜ್ ಗೆ ದಾಳಿ ನಡೆಸಿದ್ದಾರೆ. ಲಾಡ್ಜ್ ಗೆ ಆರೋಪಿಯು ಬಾಲಕಿಯ ನಕಲಿ ಆಧಾರ್ ಕಾರ್ಡ್ ನೀಡಿ ರೂಮ್ ಪಡೆದುಕೊಂಡಿದ್ದ ಎಂದು ಹೇಳಲಾಗಿದೆ.
ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇನ್ನೋರ್ವ ಬಾಲಕಿಯಿಂದಲೂ ದೂರು:
ಇನ್ನೂ ಶ್ರೀಶಾಂತ್ ಪೂಜಾರಿ ಲಾಡ್ಜ್ ನಲ್ಲಿ ಸಿಕ್ಕಿ ಬಿದ್ದಿರುವ ವಿಚಾರ ತಿಳಿದು ಇನ್ನೋರ್ವ ಬಾಲಕಿ ಕೂಡ ಆತನ ವಿರುದ್ಧ ದೂರು ದಾಖಲಿಸಿದ್ದಾಳೆ. ತನ್ನನ್ನೂ ಮದುವೆಯಾಗುವುದಾಗಿ ನಂಬಿಸಿ ಶ್ರೀಶಾಂತ್ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಅಂತ ದೂರಿನಲ್ಲಿ ಆಕೆ ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD























