ಹಿಂದೂ ಯುವತಿಯನ್ನು ಗರ್ಭಿಣಿಯಾಗಿಸಿ ವಂಚನೆ: ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣರಾವ್ ಜಾಮೀನು ಅರ್ಜಿ ತಿರಸ್ಕೃತ - Mahanayaka

ಹಿಂದೂ ಯುವತಿಯನ್ನು ಗರ್ಭಿಣಿಯಾಗಿಸಿ ವಂಚನೆ: ಬಿಜೆಪಿ ಮುಖಂಡನ ಪುತ್ರ ಶ್ರೀಕೃಷ್ಣರಾವ್ ಜಾಮೀನು ಅರ್ಜಿ ತಿರಸ್ಕೃತ

krishna j rao
25/07/2025


Provided by

ಪುತ್ತೂರು: ಸಹಪಾಠಿ ಹಿಂದೂ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ಪರಾರಿಯಾಗಿದ್ದ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಶ್ರೀ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮಂಗಳೂರು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿ ಆದೇಶಿಸಿದೆ.

ಶ್ರೀಕೃಷ್ಣ ರಾವ್ ತನ್ನ ಸಹಪಾಠಿ ಹಿಂದೂ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ,  ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ, ಬಳಿಕ ಮದುವೆಯಾಗಲು ನಿರಾಕರಿಸಿದ್ದ. ಈ ಹಿನ್ನೆಲೆಯಲ್ಲಿ ಜೂ.24ರಂದು  ಆರೋಪಿಯ ವಿರುದ್ಧ ದೂರು ದಾಖಲಾಗಿತ್ತು. ಜೂನ್ 27ರಂದು ಗಂಡು ಮಗುವಿಗೆ ಯುವತಿ ಜನ್ಮ ನೀಡಿದ್ದಳು.

ಜುಲೈ 4ರಂದು ಆರೋಪಿ ಶ್ರೀಕೃಷ್ಣರಾವ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆರೋಪಿಗೆ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಈ ನಡುವೆ ಆರೋಪಿಯು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ. ಇದೀಗ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ