ಮುಖಭಂಗ: ಮಹಾರಾಷ್ಟ್ರದಲ್ಲಿ ಮೋದಿ ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಬಿಜೆಪಿಗೆ ಹೆಚ್ಚು ನಷ್ಟ

ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದಲ್ಲಿ ಎಲ್ಲಿ ಹೆಚ್ಚು ಪ್ರಚಾರ ನಡೆಸಿದ್ದರೊ, ಆ ಕ್ಷೇತ್ರಗಳಲ್ಲೇ ಬಿಜೆಪಿಗೆ ಹೆಚ್ಚು ನಷ್ಟ ಉಂಟಾಗಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿಯು ದಯನೀಯ ಪ್ರದರ್ಶನ ತೋರಿರುವುದರಿಂದ ಮುಂಬರುವ ವಿಧಾನಸಭಾ ಚುನಾವಣೆ ಕುರಿತು ಎನ್‌ಡಿಎ ಮೈತ್ರಿಪಕ್ಷಗಳಲ್ಲಿ ಆತಂಕ ಮನೆ ಮಾಡಿದೆ.
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ದತ್ತಾಂಶದ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದಲ್ಲಿ ಎಲ್ಲಿ ಹೆಚ್ಚು ಪ್ರಚಾರ ನಡೆಸಿದ್ದರೊ, ಆ ಕ್ಷೇತ್ರಗಳಲ್ಲೇ ಬಿಜೆಪಿಗೆ ಹೆಚ್ಚು ನಷ್ಟ ಉಂಟಾಗಿದೆ. ಪ್ರಧಾನಿ ಮೋದಿ ಪ್ರಚಾರ ನಡೆಸಿದ್ದ ಮಹಾರಾಷ್ಟ್ರದ ಸುಮಾರು 18 ಲೋಕಸಭಾ ಕ್ಷೇತ್ರಗಳ ಪೈಕಿ 15 ಲೋಕಸಭಾ ಕ್ಷೇತ್ರಗಳಲ್ಲಿ ಎನ್‌ಡಿಎ ಪರಾಭವಗೊಂಡಿರುವುದು ಚುನಾವಣಾ ಆಯೋಗದ ದತ್ತಾಂಶಗಳಿಂದ ಬಯಲಾಗಿದೆ.
2019ರ ಲೋಕಸಭಾ ಚುನಾವಣೆಯಲ್ಲಿ 23 ಸ್ಥಾನಗಳನ್ನು ಗಳಿಸಿದ್ದ ಬಿಜೆಪಿ, ಈ ಬಾರಿ ಕೇವಲ 9 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಳ್ಳುವಂತಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth