ನಿಗದಿತ ದಿನಾಂಕಗಿಂತ ಬಿಜೆಪಿಯಿಂದ ಲೋಕಸಭೆ ಚುನಾವಣೆ ಘೋಷಣೆ ಸಾಧ್ಯತೆ: ತಮಿಳುನಾಡು ಸಿಎಂ ಸ್ಟಾಲಿನ್ - Mahanayaka
6:17 AM Saturday 31 - January 2026

ನಿಗದಿತ ದಿನಾಂಕಗಿಂತ ಬಿಜೆಪಿಯಿಂದ ಲೋಕಸಭೆ ಚುನಾವಣೆ ಘೋಷಣೆ ಸಾಧ್ಯತೆ: ತಮಿಳುನಾಡು ಸಿಎಂ ಸ್ಟಾಲಿನ್

11/06/2023

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿರುವ ಬಿಜೆಪಿ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಅವಧಿಪೂರ್ವವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಹೇಳಿಕೆ ನೀಡಿದ್ದಾರೆ.

ಸೇಲಂನಲ್ಲಿ ಡಿಎಂಕೆ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, 2014 ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಕಳೆದ ಒಂಬತ್ತು ವರ್ಷಗಳಲ್ಲಿ ತಮಿಳುನಾಡಿಗೆ ಬಿಜೆಪಿ ಏನು ಮಾಡಿದೆ ಎಂದು ಗೃಹಸಚಿವ ಅಮಿತ್‌ ಶಾ ಅವರನ್ನು ಪ್ರಶ್ನಿಸಿದ್ದಾರೆ.

2004–14ರ ಅವಧಿಯಲ್ಲಿ ಡಿಎಂಕೆ ಪಕ್ಷವು ಕೇಂದ್ರ ಸರ್ಕಾರದ ಭಾಗವಾಗಿದ್ದಾಗ ರಾಜ್ಯದಲ್ಲಿ 16,600 ಕೋಟಿ ರೂಪಾಯಿಗಳ ಮೆಟ್ರೋ ರೈಲು ಯೋಜನೆ, 56,664 ಕೋಟಿ ರೂಪಾಯಿಗಳ ಹೆದ್ದಾರಿ ಯೋಜನೆಗಳು ಮತ್ತು ಸೇತುಸಮುದ್ರಂ ಯೋಜನೆಗಳಂತಹ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೆವು ಎಂದು ಸ್ಟಾಲಿನ್ ಹೇಳಿದ್ದಾರೆ.

ಈ ನಡುವೆ, ಲೋಕಸಭೆ ಚುನಾವಣೆಗೆ ಸಿದ್ಧರಾಗಿರಿ ಎಂದು ಡಿಎಂಕೆ ಕಾರ್ಯಕರ್ತರಿಗೆ ಕರೆ ನೀಡಿದ ಸ್ಟಾಲಿನ್, ಯಾವುದೇ ರಾಜಕೀಯ ಪಕ್ಷವು ಡಿಎಂಕೆಯನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ