12:41 AM Thursday 21 - August 2025

ಲೋಕಸಭಾ ಚುನಾವಣೆ: ಬಂಗಾಳದಿಂದ ಕ್ರಿಕೆಟಿಗ ಮೊಹಮ್ಮದ್ ಶಮಿಯನ್ನು ಕಣಕ್ಕಿಳಿಸಲು ಬಿಜೆಪಿ ಪಕ್ಷ ಚಿಂತನೆ

08/03/2024

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಂಗಾಳದಿಂದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರನ್ನು ನಾಮನಿರ್ದೇಶನ ಮಾಡುವ ಸಾಧ್ಯತೆಯನ್ನು ಬಿಜೆಪಿ ಯೋಚಿಸುತ್ತಿದೆ ಎಂದು ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ.

ಶಮಿ ರಣಜಿ ಟ್ರೋಫಿಯಲ್ಲಿ ಬಂಗಾಳವನ್ನು ಪ್ರತಿನಿಧಿಸುತ್ತಿದ್ದಾರೆ ಮತ್ತು ರಾಜ್ಯಕ್ಕಾಗಿ ದೇಶೀಯ ಕ್ರಿಕೆಟ್ ಆಡುತ್ತಿದ್ದಾರೆ.

ಈ ಪ್ರಸ್ತಾಪದೊಂದಿಗೆ ಬಿಜೆಪಿ ನಾಯಕತ್ವವು ಶಮಿಯನ್ನು ಸಂಪರ್ಕಿಸಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಈ ಕುರಿತು ಶಮಿ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ ಎನ್ನಲಾಗಿದೆ.

ಸದ್ಯ ಶಮಿ ಇತ್ತೀಚಿನ ಶಸ್ತ್ರಚಿಕಿತ್ಸೆಯಿಂದ ಚೇತರಿಸಿಕೊಳ್ಳೋಕೇ ವಿರಾಮದಲ್ಲಿದ್ದಾರೆ.
ವೇಗಿ ಶಮಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪಿಎಂ ಮೋದಿ ಅವರು ಹಾರೈಸಿದ್ದಾರೆ.

ಭಾರತದ ಏಕದಿನ ವಿಶ್ವಕಪ್ ಅಭಿಯಾನದ ನಂತರ ಶಮಿ ಕ್ರಿಕೆಟ್ ಆಡಿಲ್ಲ. ಅವರು ಏಳು ಪಂದ್ಯಗಳಲ್ಲಿ 10.70 ಸರಾಸರಿ ಮತ್ತು 12.20 ಸ್ಟೈಕ್ ರೇಟ್ ನಲ್ಲಿ 24 ವಿಕೆಟ್ ಗಳನ್ನು ಪಡೆಯುವ ಮೂಲಕ ತಂಡವನ್ನು ಫೈನಲ್ ತಲುಪಲು ಸಹಾಯ ಮಾಡಿದ್ದರು.

ಬಿಜೆಪಿಯ ಉನ್ನತ ಮೂಲಗಳ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಶಮಿ ಅವರನ್ನು ಅಭ್ಯರ್ಥಿಯಾಗಿ ಪ್ರಸ್ತಾಪಿಸಲಾಗಿದೆ. ಈ‌ ಕುರಿತಾದ ಚರ್ಚೆಗಳು ಕೂಡಾ ನಡೆಯುತ್ತಿದೆ. ಶಮಿ ಅವರನ್ನು ಕಣಕ್ಕಿಳಿಸುವುದರಿಂದ ಬಂಗಾಳದ ಅಲ್ಪಸಂಖ್ಯಾತ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಬಿಜೆಪಿ ಪಕ್ಷಕ್ಕೆ ಸಹಾಯ ಮಾಡುತ್ತದೆ ಎಂದು ಬಿಜೆಪಿಯೊಳಗಿನ ಆಂತರಿಕ ಚರ್ಚೆಗಳು ಸೂಚಿಸಿದೆ.

ಬಿಜೆಪಿ ಮೂಲಗಳ ಪ್ರಕಾರ, ಸಂದೇಶ್ ಖಾಲಿ ಗ್ರಾಮವು ಹಿಂಸಾಚಾರಕ್ಕೆ ಸಾಕ್ಷಿಯಾದ ನಂತರ ಸುದ್ದಿಯಲ್ಲಿರುವ ಬಸಿರ್ಹತ್ ಲೋಕಸಭಾ ಕ್ಷೇತ್ರದಿಂದ ಶಮಿ ಅವರನ್ನು ಕಣಕ್ಕಿಳಿಸುವುದು ಗುರಿಯಾಗಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version