ಕೇಸ್: ಖ್ಯಾತ ಧಾರ್ಮಿಕ ವಿದ್ವಾಂಸ ಮೌಲಾನ ಸಜ್ಜಾದ್ ವಿರುದ್ಧ ದೂರು ನೀಡಿದ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾ ಮುಖಂಡ
ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ ಅವರು ಖ್ಯಾತ ಧಾರ್ಮಿಕ ವಿದ್ವಾಂಸ ಮೌಲಾನ ಸಜ್ಜಾದ್ ನೂಮಾನಿ ವಿರುದ್ಧ ದೆಹಲಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರು ಮಹಾವಿಕಾಸ್ ಅಘಾಡಿ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಮತ ಚಲಾಯಿಸಬೇಕು ಎಂದು ನೂಮಾನಿಯವರು ಹೇಳಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ ಬಳಿಕ ಅವರು ಈ ಪ್ರಕರಣವನ್ನು ದಾಖಲಿಸಿದ್ದಾರೆ.
ಬಿಜೆಪಿಯ ಜೊತೆ ಕೆಲಸ ಮಾಡುವವರನ್ನು ಬಹಿಷ್ಕರಿಸಬೇಕು ಎಂದು ನೂಮಾನಿಯವರು ಕರೆ ಕೊಟ್ಟಿದ್ದಾರೆ, ಇದು ದೇಶವನ್ನು ವಿಭಜಿಸುವ ರೀತಿಯ ಹೇಳಿಕೆಯಾಗಿದೆ ಎಂದು ಸಿದ್ದಿಕಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ನೂಮಾನಿಯವರ ಈ ಹೇಳಿಕೆಯ ಬಳಿಕ ಬಿಜೆಪಿಯ ಜೊತೆ ಕೆಲಸ ಮಾಡುವ ಮುಸ್ಲಿಮರನ್ನು ಸಾರ್ವಜನಿಕವಾಗಿ ಬಹಿಷ್ಕರಿಸಲಾಗಿದೆ. ಇಂಥ ಕಾರ್ಯಕರ್ತರು ಮಸೀದಿ ಮತ್ತು ಇತರೆಡೆಗಳಿಂದ ಜೀವ ಬೆದರಿಕೆಯನ್ನು ಎದುರಿಸುತ್ತಿದ್ದಾರೆ. ಅನೇಕ ಕಾರ್ಯಕರ್ತರು ಸೋಶಿಯಲ್ ಮೀಡಿಯಾದಲ್ಲಿ ತೀವ್ರ ನಿಂದನೆಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಿರುವ ಸಿದ್ದಿಕಿ, ಇದಕ್ಕೆಲ್ಲ ನೂಮಾನಿ ಅವರ ಈ ಹೇಳಿಕೆಯೇ ಕಾರಣ ಎಂದು ಆರೋಪಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj